ಬ್ರೇಕಿಂಗ್ ನ್ಯೂಸ್
25-08-25 06:07 pm HK News Desk ಕರ್ನಾಟಕ
ತುಮಕೂರು, ಆ.25 : ಅವರು ಆರ್‌ಎಸ್‌ಎಸ್ ಗೀತೆ ಹಾಡಬಹುದು. ಖಾಸಗಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ ರಾಜ್‌ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ, ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದು ಡಿಕೆಶಿ ಹೆಸರೆತ್ತದೆ ಟೀಕಿಸಿದರು.
Senior Congress leader and former minister K.N. Rajanna launched a sharp attack on Deputy Chief Minister D.K. Shivakumar, accusing him of double standards within the party.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am