ಬ್ರೇಕಿಂಗ್ ನ್ಯೂಸ್
26-08-25 04:48 pm Bangalore Correspondent ಕರ್ನಾಟಕ
ಬೆಂಗಳೂರು, ಆ.26 : ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದ ಆರೋಪದ ಬಗ್ಗೆ ವಿಶೇಷ ತನಿಖಾ ತಂಡದ ತನಿಖೆ ನಡುವೆಯೇ ಪ್ರಮುಖ ಅಧಿಕಾರಿಯೊಬ್ಬರು ಅಮೆರಿಕ ಪ್ರವಾಸ ತೆರಳಿದ್ದಾರೆ. ಎಸ್ಐಟಿ ಸದಸ್ಯ, ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ದಿಢೀರ್ ಅಮೆರಿಕ ಪ್ರವಾಸ ತೆರಳಿದ್ದಾರೆ.
ಅಮೆರಿಕದಲ್ಲಿ ನಡೆಯುತ್ತಿರುವ 'ಇಂಟೆಲಿಜೆಂಟ್ ಟ್ರಾನ್ಸ್ಪೋರ್ಟೇಷನ್ ಸೊಸೈಟಿ ಆಫ್ ಅಮೆರಿಕ ವರ್ಲ್ಡ್ ಕಾಂಗ್ರೆಸ್ - 2025' ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಚೇತ್ ತೆರಳಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರವು ಅವರಿಗೆ ಆಗಸ್ಟ್ 19 ರಿಂದ 31ರ ವರೆಗೆ ವೇತನ ಸಹಿತ ರಜೆಯನ್ನು ಮಂಜೂರು ಮಾಡಿದೆ.
ಅಮೆರಿಕ ಪ್ರವಾಸಕ್ಕಾಗಿ ಎಂಎನ್ ಅನುಚೇತ್ ಅವರು ಜುಲೈ 16ರಂದು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನಿರ್ದೇಶನದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಆಗಸ್ಟ್ 1ರಂದು ಅವರ ಪ್ರವಾಸಕ್ಕೆ ಅನುಮತಿ ನೀಡಿ ಆದೇಶಿಸಿತ್ತು. ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಾಲ್ವರು ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಾಜ್ಯ ಸರಕಾರ ಜುಲೈ 19ರಂದು ರಚಿಸಿತ್ತು. ಎಸ್ಐಟಿ ತನಿಖೆ ನಿರ್ಣಾಯಕ ಹಂತದಲ್ಲಿ ಇರುವಾಗಲೇ ಅನುಚೇತ್ ವಿದೇಶ ಪ್ರವಾಸ ಹೊರಟಿದ್ದು ಚರ್ಚೆಗೆ ಕಾರಣವಾಗಿದೆ.
ಮೂಲಗಳ ಪ್ರಕಾರ, ಎಂಎನ್ ಅನುಚೇತ್ ಆ.18ರಂದು ವಿದೇಶಕ್ಕೆ ತೆರಳಿದ್ದು ಸೆಪ್ಟೆಂಬರ್ 3 ಅಥವಾ 4ರಂದು ಭಾರತಕ್ಕೆ ವಾಪಸಾಗುವ ನಿರೀಕ್ಷೆಯಿದೆ. ಸದ್ಯಕ್ಕೆ ಎಡಿಜಿಪಿ ಮೊಹಂತಿ ಸೂಚನೆಯಂತೆ, ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
Even as the Special Investigation Team (SIT) continues its probe into the alleged mass burials at Dharmasthala, a key officer of the team has left for the United States, raising discussions in official and public circles. Senior IPS officer and SIT member M.N. Anucheth has traveled to the U.S. to attend the Intelligent Transportation Society of America World Congress – 2025. For this official visit, the state government sanctioned him paid leave from August 19 to 31.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am