ಬ್ರೇಕಿಂಗ್ ನ್ಯೂಸ್
25-12-20 03:37 pm Headline Karnataka News Network ಕರ್ನಾಟಕ
ಮೈಸೂರು, ಡಿ.25 : ಕೊರೊನಾ ಕಾರಣಕ್ಕೆ ಕಳೆದ ಹತ್ತು ತಿಂಗಳಿನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತೀರಾ..? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡುವುದನ್ನು ತಪ್ಪಿಸಿ ಎಂದು ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಕಡೆಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಸರಿಯೂ ಅಲ್ಲ ಎನ್ನುವ ಮೂಲಕ ರಾಜ್ಯ ಸರಕಾರದ ನೈಟ್ ಕರ್ಫ್ಯೂ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಕೊರೊನಾದಿಂದಾಗಿ ಹಲವು ಉದ್ಯಮ ಸಂಸ್ಥೆಗಳು ತೀವ್ರ ಪರಿಣಾಮ ಎದುರಿಸಿವೆ. ಏನೇ ನಿರ್ಬಂಧ ಇದ್ದರೂ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

ನೀವು ತಿಂತೀರಿ ಅಂತ ಕುರುಬ ಸಮಾಜವೇ ಬೀಫ್ ತಿನ್ನುತ್ತಾರೆಯೇ ?
ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್‌ನವರು ಮಾತ್ರ ಆಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am