ಬ್ರೇಕಿಂಗ್ ನ್ಯೂಸ್
28-08-25 06:23 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ 28 : ಸಾರ್ವಜನಿಕರಿಗೆ ಮಾತ್ರವಲ್ಲ, ಕಾನೂನು ಪಾಲಕರಿಗೂ ಕಾನೂನು ಒಂದೇ ಎಂದು ಸಾಬೀತುಪಡಿಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಪೊಲೀಸ್ ಅಧಿಕಾರಿ ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ತಮ್ಮ ಹಿರಿಯ ಅಧಿಕಾರಿಯ ವಾಹನಕ್ಕೆ ದಂಡ ವಿಧಿಸಿ, ಸ್ಥಳೀಯರಿಂದ ಮೆಚ್ಚುಗೆ ಗಳಿಸಿದ್ದಾರೆ.
ಎನ್.ಆರ್. ಪುರ ತಾಲೂಕಿನ ಪೊಲೀಸ್ ಇನ್ಸ್‌ಪೆಕ್ಟರ್ ಜೀಪ್ ಕೊಪ್ಪ ಪಟ್ಟಣದ ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿತ್ತು. ಕರ್ತವ್ಯ ನಿರತರಾಗಿದ್ದ ಕೊಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಬಸವರಾಜ್ ಈ ಜೀಪನ್ನು ಗಮನಿಸಿ, ತಕ್ಷಣವೇ ಅದನ್ನು ಲಾಕ್ ಮಾಡಿಸಿದ್ದಾರೆ. ನಿಯಮಗಳ ಪ್ರಕಾರ, ವಾಹನ ನಿಲ್ಲಿಸಬಾರದ ಜಾಗದಲ್ಲಿ ನಿಲ್ಲಿಸಿದ ಕಾರಣ ಜೀಪ್‌ಗೆ ₹500 ದಂಡ ವಿಧಿಸಲಾಗಿದೆ.

ನಂತರ, ಚಾಲಕ ₹500 ದಂಡವನ್ನು ಕಟ್ಟಿ ಜೀಪನ್ನು ಬಿಡಿಸಿಕೊಂಡು ಹೋಗಿದ್ದಾರೆ. ಈ ಘಟನೆ ಸ್ಥಳೀಯರ ಗಮನ ಸೆಳೆದಿದ್ದು, ಪಿಎಸ್‌ಐ ಬಸವರಾಜ್ ಅವರ ನಿಷ್ಪಕ್ಷಪಾತ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರಭಾವಕ್ಕೆ ಒಳಗಾಗದೆ, ತಮ್ಮ ಹಿರಿಯ ಅಧಿಕಾರಿಯ ವಾಹನಕ್ಕೂ ದಂಡ ವಿಧಿಸಿದ ಪಿಎಸ್‌ಐ ಕಾರ್ಯ ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ರವಾನಿಸಿದೆ.
ಇಂತಹ ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತ ಕಾರ್ಯಗಳು ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ವಿಶ್ವಾಸ ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆ ಈಗ ಸೋಶಿಯಲ್ ಮೆಡಿಯದಲ್ಲೂ ವೈರಲ್ ಆಗಿದ್ದು, ಪಿಎಸ್‌ಐ ಬಸವರಾಜ್ ಕಾರ್ಯವೈಖರಿಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.
A traffic police officer in Koppa town of Chikkamagaluru district has earned widespread praise for showing that the law applies equally to everyone — even to those who enforce it. In a commendable act of impartiality, PSI Basavaraj from Koppa Police Station issued a fine and locked the vehicle of a senior police inspector.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am