ಬ್ರೇಕಿಂಗ್ ನ್ಯೂಸ್
30-08-25 04:51 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಹಾಗೂ ಅವರ ಕುಟುಂಬಸ್ಥರ ಮೇಲಿನ ಅವಹೇಳನಕಾರಿ ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಯೂಟ್ಯೂಬ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದ್ದ ಆಧಾರ ರಹಿತ ವಿಡಿಯೋ ಮತ್ತು ಪೋಸ್ಟ್‌ಗಳಿಗೆ ಕೋರ್ಟ್ ತಡೆಯಾಜ್ಞೆ ನೀಡಿದ್ದು, ತಕ್ಷಣವೇ ಡಿಲೀಟ್ ಮಾಡುವಂತೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ.ಹರ್ಷೇಂದ್ರ ಕುಮಾರ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿದ್ದರು. ದಾವೆಯಲ್ಲಿ ಸಿಟಿ ಸಿವಿಲ್ ನ್ಯಾಯಾಲಯ ಪ್ರತಿಬಂಧಕಾಜ್ಞೆಯನ್ನು ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಯೂಟ್ಯೂಬ್ ಚಾನೆಲ್‌ನವರು ಸುಪ್ರೀಂ ಕೋರ್ಟ್‌ನಲ್ಲಿ ದೂರು ದಾಖಲಿಸಿತ್ತು. ಸುಪ್ರೀಂ ಕೋರ್ಟ್ ಈ ಬಗ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಮೌಖಿಕವಾಗಿ ತಿಳಿಸಿತ್ತು.
ಆನಂತರ ಕುಡ್ಲ ರಾಂಪೇಜ್ ತಂಡವು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ತಡೆಯಾಜ್ಞೆ ಆದೇಶವನ್ನು ವಜಾಗೊಳಿಸಿ, ಮರು ತನಿಖೆ ನಡೆಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಸಲ್ಲಿಸಿದ್ದರು.
ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್, ಅವಹೇಳನಕಾರಿ ವಿಡಿಯೋಗಳು, ದಾಖಲೆಗಳು ಹಾಗೂ ಪ್ರಕರಣವನ್ನು ಪರಿಗಣಿಸಿ ಎರಡು ವಾರಗಳಲ್ಲಿ ತೀರ್ಪು ನೀಡುವಂತೆ ಕೆಳ ನ್ಯಾಯಾಲಯಕ್ಕೆ ಸೂಚಿಸಿತ್ತು. ಹರ್ಷೇಂದ್ರ ಕುಮಾರ್ ಪರವಾಗಿ ಸಲ್ಲಿಸಿದ್ದ ದಾಖಲೆಗಳು, ವಿಡಿಯೋಗಳು ಹಾಗೂ ಅವರ ಅರ್ಜಿಯನ್ನು ಪರಿಗಣಿಸಿ, ಐದು ದಿನಗಳ ಕಾಲ ವಾದ ಆಲಿಸಿದ ಸಿಟಿ ಸಿವಿಲ್ ನ್ಯಾಯಾಧೀಶರು, ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದ ವೀಡಿಯೋ, ಮೆಸೇಜ್ ಹಾಗೂ ರೀಲ್ಸ್‌ಗಳನ್ನು ನ್ಯಾಯಾಲಯದಲ್ಲಿ ವೀಕ್ಷಿಸಿ ಮಧ್ಯಂತರ ತೀರ್ಪು ನೀಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್ ಮತ್ತು ಜಯಂತ್ ಟಿ. ಮತ್ತಿತರರ ವಿರುದ್ಧ ಪ್ರತಿಬಂಧಕಾಜ್ಞೆ ನೀಡಿದ್ದಲ್ಲದೆ, ನಿಂದನಾತ್ಮಕವಾಗಿ ಮಾತನಾಡಿದ್ದ ಎಲ್ಲ ವಿಡಿಯೋಗಳನ್ನು ತಕ್ಷಣ ಡಿಲೀಟ್ ಮಾಡುವಂತೆ ಆದೇಶಿಸಿದೆ.
The Bengaluru City Civil and Sessions Court has directed the immediate deletion of defamatory videos published against Dharmasthala, its Dharmadhikari, and his family members. The order applies to videos, reels, and posts uploaded on YouTube and other social media platforms, which the court found to be baseless and derogatory.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am