ಬ್ರೇಕಿಂಗ್ ನ್ಯೂಸ್
02-09-25 02:37 pm HK News Desk ಕರ್ನಾಟಕ
ಬೆಂಗಳೂರು, ಸೆ.2 : ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ಏಜನ್ಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳುವ ಸೂಚನೆ ಲಭಿಸಿದೆ. ಷಡ್ಯಂತ್ರ ಮತ್ತು ವಿದೇಶಿ ಫಂಡಿಂಗ್ ವಿಚಾರದಲ್ಲಿ ಸ್ಥಳೀಯ ಪೊಲೀಸರು ಇಡಿಗೆ ದಾಖಲೆಗಳನ್ನು ಸಲ್ಲಿಸಿದ್ದು, ಅಧಿಕಾರಿಗಳು ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಲಿದ್ದಾರೆ.
ಫಾರಿನ್ ಎಕ್ಸ್ ಚೇಂಜ್ ಮ್ಯಾನೇಜ್ಮೆಂಟ್ ಏಕ್ಟ್ ನಡಿ ಇಡಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಿದೆ. ಒಡನಾಡಿ ಮತ್ತು ಸಂವಾದ ಎನ್ನುವ ಎರಡು ಎನ್ ಜಿಓಗಳ ಬಗ್ಗೆ ತನಿಖೆ ನಡೆಸಲಿದ್ದು, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ನಡೆಸಲು ವಿದೇಶದಿಂದ ಅಕ್ರಮವಾಗಿ ಹಣಕಾಸು ನೆರವು ಪಡೆದಿದ್ದಾರೆಂಬ ಆರೋಪದಲ್ಲಿ ತನಿಖೆ ನಡೆಯಲಿದೆ.
ಎನ್ ಜಿಓಗಳು ಮತ್ತು ಹೋರಾಟಕ್ಕೆ ಸಂಬಂಧಿಸಿದವರ ಐದು ವರ್ಷಗಳ ಬ್ಯಾಂಕ್ ವಹಿವಾಟು, ಇನ್ನಿತರ ಬ್ಯಾಂಕ್ ಚಟುವಟಿಕೆಗಳು, ಪಾನ್ ಕಾರ್ಡ್ ಮಾಹಿತಿಗಳನ್ನು ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಇಡಿ ಪತ್ರ ಬರೆದಿದೆ ಎಂಬುದಾಗಿ ಇಂಡಿಯಾ ಟುಡೇ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ರಾಜ್ಯ ಬಿಜೆಪಿ ವತಿಯಿಂದ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದವರ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಧರ್ಮಸ್ಥಳ ಚಲೋ ನಡೆದಿತ್ತು. ಎಸ್ಐಟಿ ಬಗ್ಗೆ ನಂಬಿಕೆ ಇಲ್ಲ. ಆಡಳಿತ ಪಕ್ಷದವರೇ ಷಡ್ಯಂತ್ರ ಇದೆ ಎಂದಿದ್ದಾರೆ. ಇದರ ಮೇಲೆ ರಾಜ್ಯದ ತನಿಖಾ ಏಜನ್ಸಿಯಿಂದ ವಿದೇಶಿ ಫಂಡಿಂಗ್ ಪತ್ತೆ ಮಾಡಲು ಸಾಧ್ಯವೇ ಇತ್ಯಾದಿ ಪ್ರಶ್ನೆಗಳನ್ನು ಬಿಜೆಪಿ ನಾಯಕರು ಎತ್ತಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಎಸ್ಐಟಿ ತನಿಖೆ ನಡೆಯುತ್ತಿದೆ, ಹಾಗಿರುವಾಗ ಎನ್ಐಎ ತನಿಖೆ ನಡೆಸುವ ಅಗತ್ಯವಿಲ್ಲ. ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದಿದ್ದರು.
ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್ ಆಗಿದೆ, ಅಪಪ್ರಚಾರ, ಹಿಂದು ಶ್ರದ್ಧಾಕೇಂದ್ರಗಳನ್ನು ಗುರಿಯಾಗಿಸಿ ಈ ಫಂಡಿಂಗ್ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಪುಕಾರು ಹಬ್ಬಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ಸುರೇಶ್ ಗೌಡ ಎಂಬವರು ಇಡಿ ಕಚೇರಿಗೆ ದೂರು ಕೊಟ್ಟು ತನಿಖೆಗೆ ಆಗ್ರಹ ಮಾಡಿದ್ದರು. ನಕಲಿ ಮಾನವ ಹಕ್ಕು ಆಯೋಗದ ಬಗ್ಗೆ ತನಿಖೆ ಮಾಡುವಂತೆಯೂ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸುರೇಶ್ ದೂರು ನೀಡಿದ್ದರು.
The Enforcement Directorate (ED) has entered the Dharmasthala case, opening a separate FIR to investigate allegations of foreign funding and conspiracy. Local police have already submitted relevant documents to the central agency, prompting ED to begin its own probe under the Foreign Exchange Management Act (FEMA).
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm