ಬ್ರೇಕಿಂಗ್ ನ್ಯೂಸ್
02-09-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಜನಸಂಖ್ಯೆ, ಬೃಹತ್ ವ್ಯಾಪ್ತಿಯನ್ನು ಆಧರಿಸಿ ಬಿಬಿಎಂಪಿಯನ್ನು ಒಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಐದು ಕಾರ್ಪೊರೇಷನ್ ಗಳಾಗಿ ಬದಲಿಸಲಾಗಿದೆ. ಗ್ರೇಟರ್ ಬೆಂಗಳೂರು ರಚನೆ ಬೆನ್ನಲ್ಲೇ ಐದು ನಗರ ಪಾಲಿಕೆಗಳಿಗೆ ಪ್ರತ್ಯೇಕ ಆಯುಕ್ತರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಉತ್ತರ, ಕೇಂದ್ರ, ಪೂರ್ವ, ದಕ್ಷಿಣ ಹಾಗೂ ಪಶ್ಚಿಮ ಎಂದು ಮಹಾನಗರ ಪಾಲಿಕೆಗಳನ್ನು ವಿಭಜಿಸಿದ್ದು ಅವುಗಳಿಗೆ ಐಎಎಸ್ ಅಧಿಕಾರಿಗಳನ್ನು ಆಯುಕ್ತರಾಗಿ ನೇಮಿಸಲಾಗಿದೆ. ಜನಸಂಖ್ಯೆ ಪ್ರಮಾಣ, ಆದಾಯ, ಕೈಗಾರಿಕೆಗಳು, ಉದ್ಯೋಗದ ಹೆಚ್ಚಳ, ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳನ್ನು ಆಧರಿಸಿ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಐದು ನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ. ಜಿಬಿಎ ಹಾಗೂ ಐದು ನಗರ ಪಾಲಿಕೆ ಆಡಳಿತ ನಿರ್ವಹಣೆಗೆ ಐಎಎಸ್, ಐಪಿಎಸ್, ಕೆಎಎಸ್, ಕೆಎಸ್‌ಪಿಎಸ್ ಹುದ್ದೆಗಳನ್ನು ಮರು ವಿನ್ಯಾಸಗೊಳಿಸಲಾಗಿದೆ.
ಸೆ.2ರಿಂದಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಬೆಂಗಳೂರನ್ನು ಪ್ರತಿನಿಧಿಸುತ್ತಿದ್ದ ಬಿಬಿಎಂಪಿಗೆ ಶಾಸಕ ಎಸ್.ಸುರೇಶ್ ಕುಮಾರ್ ಶ್ರದ್ದಾಂಜಲಿ ಸಲ್ಲಿಸಿದ್ದಾರೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಬಿಎಂಪಿಗೆ ಎರಡು ನಿಮಿಷದ ಮೌನಾಚರಿಸಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.
ಬೆಂಗಳೂರು ಪಾಲಿಕೆಗಳಿಗೆ 5 ಆಯುಕ್ತರ ನೇಮಕ
ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ವಿಭಜನೆಗೊಂಡ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಸೇರಿದಂತೆ ಐದು ಪಾಲಿಕೆಗಳಿಗೆ ಆಯುಕ್ತರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಮಾಡಲಾಗಿದೆ. ಪೂರ್ವ ನಗರ ಪಾಲಿಕೆ ಆಯುಕ್ತರಾಗಿ ರಮೇಶ್ ಡಿ.ಎಸ್ ನೇಮಕಗೊಂಡಿದ್ದರೆ, ಪೂರ್ವ ಅಪರ ಆಯುಕ್ತರಾಗಿ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ನೇಮಿಸಲಾಗಿದೆ. ಉತ್ತರ ನಗರ ಪಾಲಿಕೆ ಆಯುಕ್ತೆಯಾಗಿ ಪೊಮ್ಮಳ ಸುನೀಲ್ ಕುಮಾರ್, ಉತ್ತರ ಅಪರ ಆಯುಕ್ತರಾಗಿ ಲತಾ ಆರ್ ನೇಮಕವಾಗಿದ್ದಾರೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾಗಿ ರಮೇಶ್.ಕೆ ಎನ್, ದಕ್ಷಿಣ ಪಾಲಿಕೆ ಅಪರ ಆಯುಕ್ತರಾಗಿ ಪಾಂಡೆ ರಾಹುಲ್ ತುಕಾರಾಮ್, ಪಶ್ಚಿಮ ಪಾಲಿಕೆ ಆಯುಕ್ತರಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ. ಬೇರೆ ಕರ್ತವ್ಯದಲ್ಲಿರುವ ಐಎಎಸ್ ಅಧಿಕಾರಿಗಳಿಗೆ ಇವುಗಳ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
In a major administrative restructuring, the Bruhat Bengaluru Mahanagara Palike (BBMP) has been dissolved and replaced by the Greater Bengaluru Authority (GBA). To ensure smooth governance, the city has been divided into five municipal corporations — North, South, Central, East, and West — each headed by a separate Commissioner.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am