ಬ್ರೇಕಿಂಗ್ ನ್ಯೂಸ್
03-09-25 08:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3 : ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ನಾಯಕರಿದ್ದ ವಿಡಿಯೋವನ್ನು ತಿರುಚಿ, ಹೆಣ್ಣಿಗೆ ನ್ಯಾಯ ಕೊಡದೆ ಧರ್ಮದ ವಿಚಾರದಲ್ಲಿ ದೊಂಬರಾಟ ಎಂದು ಬರೆದು ಅಣಕಿಸಿ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಘಟನೆ ಬಗ್ಗೆ ರಾಜ್ಯ ಬಿಜೆಪಿಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದು ವಿಡಿಯೋದಲ್ಲಿ ಹಾನಿಕಾರಕ ಕಂಟೆಂಟ್ ಹಾಕಿದ್ದರೂ ಗೃಹ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೌಜನ್ಯಾಗೆ ನ್ಯಾಯ ದೊರಕಿಸುವ ವಿಚಾರದಲ್ಲಿ ಯಾವುದೇ ಒಳ ಒಪ್ಪಂದದ ನಡೆ ಇಲ್ಲ. ಸೌಜನ್ಯಾ ತಾಯಿ ಇಟ್ಟಿರುವ ಬೇಡಿಕೆ ಪರವಾಗಿ ಇರುವುದಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ಇದೆಯೆಂದು ತಿಳಿಸಿದ್ದಾರೆ ಎಂದರು.
ಧರ್ಮದ ವಿಚಾರದಲ್ಲಿ ಇಂಥ ಹುಡುಗಾಟ ಮಾಡಿದರೆ, ನಾವು ಸಹಿಸುವುದಿಲ್ಲ. ಸರ್ಕಾರದ ವಿರುದ್ಧ ಬೇರೆ ಯಾವುದೇ ಸಾಮಾಜಿಕ ಜಾಲತಾಣದ ಪೋಸ್ಟ್ ಬಂದಾಗ ತಕ್ಷಣ ಬಂಧಿಸುತ್ತಾರೆ. ಸಂಬಂಧಿತ ವ್ಯಕ್ತಿಯ ಮೇಲೆ ಕೂಡಲೇ ಕೇಸ್ ದಾಖಲಿಸಬೇಕು. ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ವಿಡಿಯೋವನ್ನು ತಕ್ಷಣ ತೆಗೆಯಬೇಕು ಎಂದು ಒತ್ತಾಯಿಸಿದರು.
ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ನ್ಯಾಯಬದ್ಧವಾಗಿ ಹೋರಾಟ ಮಾಡಿದೆ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ಯಾರೇ ಅಗೌರವ ತರಲು ಪ್ರಯತ್ನ ಪಟ್ಟರೂ ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಷಡ್ಯಂತ್ರ ವಿರೋಧಿಸಿ ಮತ್ತು ಸರಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ನಾವು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದೆವು ಎಂದು ವಿವರಿಸಿದರು.
The Karnataka unit of the Bharatiya Janata Party (BJP) has lodged a complaint at the Upparpet Police Station in Bengaluru against a social media post that allegedly mocked the party’s ‘Dharmasthala Chalo’ protest.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm