ಬ್ರೇಕಿಂಗ್ ನ್ಯೂಸ್
06-09-25 07:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.06: ವಿಶ್ವ ವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ, ಬಾನು ಮುಷ್ತಾಕ್ ಅವರಿಗೆ ಅಹ್ವಾನ ನೀಡಿರುವ ಆದೇಶ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆ ನಿಗದಿಯಾಗಬೇಕಾಗಿದೆ.
ಅರ್ಜಿಯಲ್ಲೇನಿದೆ? "ಮೈಸೂರು ಸಂಸ್ಥಾನವನ್ನು ಮಹಿಷಾಸುರ ಎಂಬ ರಾಕ್ಷಸ ಆಳ್ವಿಕೆ ಮಾಡುತ್ತಿದ್ದು, ಅವರ ದಬ್ಬಾಳಿಕೆಯನ್ನು ಶಿವನ ಪತ್ನಿ ಪಾರ್ವತಿ ದೇವಿ ಚಾಮುಂಡೇಶ್ವರಿಯಾಗಿ ಅವತರಿಸಿ ಚಾಮುಂಡಿ ಬೆಟ್ಟದಲ್ಲಿ ಸಂಹಾರ ಮಾಡಿದ್ದರು. ಅಂದಿನಿಂದ ಈ ನಗರಕ್ಕೆ ಮಹಿಷೂರು ಎಂಬ ಹೆಸರು ಬಂದಿದೆ ಎಂಬ ಪ್ರತೀತಿಯಿದೆ. ಬಳಿಕ ಆಡಳಿತ ನಡೆಸಿದ್ದ ಬ್ರಿಟಿಷರು ಮೈಸೂರು ಎಂಬುದಾಗಿ ಮರು ನಾಮಕರಣಗೊಳಿಸಿದ್ದರು".
"ಮೈಸೂರಿನ ಚಾಮುಂಡೇಶ್ವರಿಯನ್ನು ನಾಡದೇವಿ ಎಂಬುದಾಗಿ ಸಂಬೋಧಿಸುತ್ತಿದ್ದು, ಹಿಂದೂ ಧರ್ಮೀಯರ ಪವಿತ್ರಸ್ಥಳ ಎಂಬುದಾಗಿ ಪೂಜಿಸಲಾಗುತ್ತಿದೆ. ಮೈಸೂರು ದಸರಾ ಹಬ್ಬವನ್ನು ನಾಡ ಹಬ್ಬ ಎಂಬುದಾಗಿ ಕರೆಯಲಾಗುತ್ತಿದೆ. ಆದರೆ, 2025ರ ಆಗಸ್ಟ್ 23ರಂದು ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರನ್ನು ದಸರಾ ಹಬ್ಬದ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ ನೀಡಿದೆ. ಬಾನು ಮುಷ್ತಾಕ್ ಅವರು ಬೇರೊಂದು ಧರ್ಮಕ್ಕೆ ಸೇರಿದವರಾಗಿದ್ದಾರೆ. ಹಿಂದೂ ಮತ್ತು ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ".
"ದಸರಾ ಉದ್ಘಾಟನೆಯಲ್ಲಿ ಮುಖ್ಯ ಪಾತ್ರವು ಕೇವಲ ಔಪಚಾರಿಕವಲ್ಲ. ಬದಲಾಗಿ ಲಕ್ಷಾಂತರ ಭಕ್ತರ ಪವಿತ್ರವೆಂದು ಪರಿಗಣಿಸುವ ಹಿಂದೂ ಧಾರ್ಮಿಕ ಆಚರಣೆಗಳಳಲ್ಲೊಂದಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳು ಚಾಮುಂಡೇಶ್ವರಿ ದೇವಿಯ ಗರ್ಭ ಗುಡಿಯ ಮುಂದೆ ಪವಿತ್ರ ದೀಪ ಹಚ್ಚಿ ಪೂಜಾ ಕೈಂಕರ್ಯಗಳಲ್ಲಿ ತೊಡಗಬೇಕಾಗುತ್ತದೆ. ಇದು ನಿಜವಾದ ಭಕ್ತಿ ತೋರ್ಪಡಿಸುವುದಾಗಿದೆ. ಹೀಗಾಗಿ ಸರ್ಕಾರದ ನಿರ್ಧಾರದಿಂದ ಹಿಂದೂ ಸಂಘಟನೆಗಳು, ಧಾರ್ಮಿಕ ಮುಖಂಡರು ಹಾಗೂ ಸಾಮಾನ್ಯ ಭಕ್ತರಿಗೆ ಕಳವಳಕ್ಕೆ ಕಾರಣವಾಗಿದೆ".
"ಧರ್ಮದ ಆಚರಣೆ ಎಂಬುದು ಸಂವಿಧಾನ ಬದ್ಧ ಹಕ್ಕಾಗಿದ್ಧು, ಧಾರ್ಮಿಕ ಸಂಪ್ರದಾಯಗಳು ಮುಂದುವರೆಯಬೇಕು. ಹೀಗಾಗಿ ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದು ಸಂವಿಧಾನದ ಪರಿಚ್ಛೇದ 25 ಮತ್ತು 26ರಲ್ಲಿ ಲಭ್ಯವಾಗಿರುವ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಉಲ್ಲಂಘನೆಯಾದಂತಾಗಿದೆ".
"ದಸರಾ ಆಚರಣೆ ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವಾಗಿದ್ದು, ಇದಕ್ಕೆ ರಾಜ ಮನೆತನದವರು ಸೇರಿದಂತೆ ಇತರರೊಂದಿಗೆ ಸಮಾಲೋಚನೆ ಮಾಡದೇ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ತಡೆ ನೀಡಬೇಕು. ಸರ್ಕಾರದ ಈ ಕ್ರಮದಿಂದ ಸಾರ್ವಜನಿಕವಾಗಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳಿಗೆ ಕಾರಣವಾಗಿದೆ. ಅಲ್ಲದೆ, ಶಾಂತಿ ಉಲ್ಲಂಘನೆ ಮತ್ತು ಕೋಮು ಗಲಭೆಗೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದ್ದು ಇದನ್ನು ತಡೆಯಬೇಕಾಗಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಮಧ್ಯಂತರ ತಡೆ ನೀಡಬೇಕು".
"ಸರ್ಕಾರದ ಕ್ರಮ ಸಾಹಿತ್ಯದಲ್ಲಿನ ಸಾಧನೆ ಮತ್ತು ಸಾಂಸ್ಕೃತಿಕವಾಗಿ ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದ್ದರೂ, ಸಮಾಜದ ವಿವಿಧ ವರ್ಗಗಳಲ್ಲಿನ ಸಾಂಪ್ರದಾಯಿಕ ಪದ್ಧತಿಗಳಿಗೆ ಹೊಂದಿಕೆಯಾಗುವುದಿಲ್ಲ. ಆದ್ದರಿಂದ ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು" ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
Former Mysuru-Kodagu MP Pratap Simha has approached the Karnataka High Court challenging the state government's decision to invite internationally acclaimed Booker Prize-winning author Banu Mushtaq to inaugurate the world-famous Mysuru Dasara festivities.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm