Mandya Suicide, Marriage: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ 26 ವರ್ಷದ ಯುವತಿ

07-09-25 10:11 am       HK News Desk   ಕರ್ನಾಟಕ

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯಲ್ಲಿ ನಡೆದಿದೆ.

ಮಂಡ್ಯ, ಸೆ 07 : ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯಲ್ಲಿ ನಡೆದಿದೆ.

ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ವಳಗೆರೆ ಮೆಣಸ ಗ್ರಾಮದ ಕಾವ್ಯ(26) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಯುವತಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ ಕಚೇರಿಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಳು. ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

In a tragic incident reported from KR Pet in Mandya district, a 26-year-old woman allegedly died by suicide at her workplace after her engagement was called off. The deceased has been identified as Kavya, a resident of Valagere Menasa village. She was employed at the Raitha Samparka Kendra (Farmer Contact Center) in Kikkeri, KR Pet Taluk.