ಬ್ರೇಕಿಂಗ್ ನ್ಯೂಸ್
08-09-25 08:07 pm HK News Desk ಕರ್ನಾಟಕ
ಶಿವಮೊಗ್ಗ, ಸೆ.8 : ಇದೇ ತಿಂಗಳ 25 ರಂದು ಹಸೆಮಣೆ ಏರಬೇಕಿದ್ದ ಯುವತಿಯ ಮೇಲೆ ಬಸ್ ಹರಿದ ಪರಿಣಾಮ ಆಕೆ ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ಮಲವಗೂಪ್ಪದಲ್ಲಿ ನಡೆದಿದೆ.
ಕವಿತಾ (22) ಮೃತ ಯುವತಿ.
ಶಿವಮೊಗ್ಗ ತಾಲೂಕು ದುಮ್ಮಳ್ಳಿಯ ಶಿವಪುರ ತಾಂಡಾದ ನಿವಾಸಿಯಾಗಿರುವ ಕವಿತಾ ಎಂಎಸ್ಸಿ ಪದವೀಧರೆಯಾಗಿದ್ದು, ನಗರದ ಸರ್ಜಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಕವಿತಾ ಅವರು ತಮ್ಮ ಸಹೋದರನ ಜೊತೆ ಬೈಕ್ನಲ್ಲಿ ಮನೆಯಿಂದ ಆಸ್ಪತ್ರೆಗೆ ಹೊರಟಿದ್ದರು. ಇನ್ನು 17 ದಿನಗಳಲ್ಲಿ ಮದುವೆ ಸಂಭ್ರಮದಲ್ಲಿ ತೇಲಬೇಕಿದ್ದ ಯುವತಿ ಜವರಾಯನ ರೂಪದಲ್ಲಿ ಬಂದ ಬಸ್ಗೆ ಬಲಿಯಾಗಿದ್ದಾರೆ.
ನಾಳೆಯಿಂದ ಕೆಲಸಕ್ಕೆ ರಜೆ ಹಾಕಿ ಮದುವೆ ತಯಾರಿಯಲ್ಲಿ ತೊಡಗಿಸಿಕೊಳ್ಳಲು ಕವಿತಾ ಯೋಜಿಸಿದ್ದರು. ಆದರೆ, ವಿಧಿಯ ಆಟಕ್ಕೆ ಆಕೆ ಬಲಿಯಾಗಿರುವುದು ನಿಜಕ್ಕೂ ಮನಕಲಕುವಂತಾಗಿದೆ.
ಬಿದ್ದ ಕವಿತಾ ಮೇಲೆ ಹರಿದ ಬಸ್:
ಕೆಲಸಕ್ಕೆಂದು ಸಹೋದರನ ಜೊತೆ ಬೈಕ್ನಲ್ಲಿ ಬರುವಾಗ ಮಲವಗೂಪ್ಪದಲ್ಲಿ ಎದುರಿನಿಂದ ಮತ್ತೊಂದು ಬೈಕ್ ಬಂದಿದೆ. ಈ ವೇಳೆ ಅದರ ಹ್ಯಾಂಡಲ್ ಕವಿತಾಗೆ ತಾಗಿದೆ. ಹಿಂದೆ ಕುಳಿತಿದ್ದ ಅವರು ಬಲಗಡೆಯಿಂದ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದೆಯೇ ಬರುತ್ತಿದ್ದ ಸಿಟಿ ಬಸ್ ಯುವತಿ ಮೇಲೆ ಹರಿದು ಹೋಗಿದೆ. ಇದರಿಂದ ಕವಿತಾ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ. ಸಹೋದರಿಯ ಮೃತದೇಹ ಕಂಡು ಸಹೋದರ ರಸ್ತೆಯಲ್ಲೇ ಗೋಳಾಡಿದ್ದಾರೆ.
ಅವೈಜ್ಞಾನಿಕ ರಸ್ತೆ ಕಾಮಗಾರಿ:
ಈ ಭಾಗದಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ಸ್ಥಳೀಯ ಹನುಮನಾಯಕ್ ಎಂಬವರು ಮಾತನಾಡಿ, ಶಿವಮೊಗ್ಗ ಮತ್ತು ಭದ್ರಾವತಿ ನಡುವಿನ ರಸ್ತೆ ಕಾಮಗಾರಿಯು ಅವೈಜ್ಞಾನಿಕವಾಗಿ ಕೂಡಿದೆ. ಹಳೆ ಶುಗರ್ ಫ್ಯಾಕ್ಟರಿ ಬಳಿ ನಡೆಯುತ್ತಿರುವ ಕಾಮಗಾರಿ ಹಾಗೂ ಡಿವೈಡರ್ ಅಪಾಯದ್ದಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು.
ಇದು ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅಪಘಾತ ನಡೆಯದಂತೆ ಕ್ರಮ ಜರುಗಿಸಬೇಕಿದೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಕವಿತಾ ಅವರು ಇಂದು ಬಸ್ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಆಕೆ ಕುಟುಂಬದ ನಿರ್ವಹಣೆಯ ಹೊಣೆ ಹೊತ್ತಿದ್ದರು. ಬಸ್ ಹರಿದು ಸಾವಿಗೀಡಾಗಿದ್ದು, ಈಗ ಕುಟುಂಬ ಅನಾಥವಾಗಿದೆ. ಇದಕ್ಕೆಲ್ಲಾ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣ ಎಂದು ದೂರಿದರು.
In a heart-wrenching incident, a 22-year-old woman who was set to get married later this month lost her life in a road accident near Malavaguppa on the outskirts of Shivamogga. The deceased, Kavitha, was a resident of Shivapura Tanda in Dummalli, Shivamogga taluk. A postgraduate in M.Sc., she worked at Sarji Hospital in the city.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm