ಬ್ರೇಕಿಂಗ್ ನ್ಯೂಸ್
16-09-25 10:54 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನೂರ್ಜಿತಗೊಳಿಸಿದೆ. ಅಲ್ಲದೆ, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಂಜೇಗೌಡ ಮತ್ತು ನಿಕಟ ಪ್ರತಿಸ್ಪರ್ಧಿ ಕೆ.ಎಸ್ ಮಂಜುನಾಥ್ ಪರ ಚಲಾವಣೆಯಾದ ಮತಗಳ ಮರು ಎಣಿಕೆಗೆ ಆದೇಶಿಸಿದೆ.
ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಸುಮಾರು ಎರಡು ವರ್ಷಗಳ ವಿಚಾರಣೆಯ ನಂತರ, ನ್ಯಾಯಾಲಯವು ಮರು ಎಣಿಕೆ ಮಾಡುವಂತೆ ಆದೇಶಿಸಿ, ನಂಜೇಗೌಡ ಅವರ ಆಯ್ಕೆಯನ್ನು ಅಮಾನ್ಯ ಎಂದು ಘೋಷಿಸಿತು.
ಆದಾಗ್ಯೂ, ನಂಜೇಗೌಡ ಪರ ವಕೀಲರ ಮನವಿ ಮೇರೆಗೆ, ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯಂತರ ಪರಿಹಾರವು ಕಾಂಗ್ರೆಸ್ ಶಾಸಕರಿಗೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ. ಆ ಅವಧಿಯೊಳಗೆ ಸುಪ್ರೀಂ ಕೋರ್ಟ್ನಿಂದ ಯಾವುದೇ ನಿರ್ದೇಶನ ಬಾರದಿದ್ದರೆ, ಶಾಸಕ ಸ್ಥಾನ ಅನೂರ್ಜಿತಗೊಳ್ಳಲಿದೆ. ಮರು ಮತ ಎಣಿಕೆ ನಡೆಯಲಿದೆ.
The Karnataka High Court on Tuesday set aside the election of Congress MLA K.Y. Nanjegowda, who represents the Malur constituency in Kolar district, and directed a recount of votes polled in the 2023 Assembly elections.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am