ಬ್ರೇಕಿಂಗ್ ನ್ಯೂಸ್
17-09-25 06:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 17 : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿbಚಲಿಸುತ್ತಿದ್ದ ರಾಜಹಂಸ ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು ಆತನ ಸಮಯ ಪ್ರಜ್ಞೆ ಹಾಗೂ ಮಾನವೀಯ ತೆಯಿಂದ 45ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ರಾಜೀವ್ ಬಿರಾದಾರ್ (50) ಹೃದಯಾಘಾತದಿಂದ ಮೃತಪಟ್ಟ ಚಾಲಕ. ಇವರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಸುಮಾರು 20ವರ್ಷಗಳಿಂದ ಕೆಎಸ್‌ಆರ್‌ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಂಗಳೂರು ಮೆಜೆಸ್ಟಿಕ್‌ನಿಂದ ದಾವಣಗೆರೆಯ ಹರಿಹರಕ್ಕೆ ನೆಲಮಂಗಲ ಮಾರ್ಗವಾಗಿ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ಚಾಲಕ ರಾಜೀವ್ ಬಿರಾದಾರ್‌ಗೆ ಹೃದಯಾಘಾತವಾಗಿದೆ, ತಕ್ಷಣ ಆತ ಬಸ್ ಅನ್ನು ಹೆದ್ದಾರಿಯಲ್ಲಿನ ಎಡಭಾಗಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ.
ತಕ್ಷಣ ಪ್ರಯಾಣಿಕರು 108ಕ್ಕೆ ಕರೆ ಮಾಡಿ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿದ್ದು ಆ್ಯಂಬುಲೆನ್ಸ್‌ನಲ್ಲಿ ಪ್ರಥಮ ಚಿಕಿತ್ಸೆ ಸಿಗದೆ ಮಾರ್ಗ ಮಧ್ಯೆ ರಾಜೀವ್ ಮೃತಪಟ್ಟಿದ್ದಾರೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು ಅವರ ಕುಟುಂಬಕ್ಕೆ ಮೃತ ದೇಹವನ್ನು ಹಸ್ತಾಂತರ ಮಾಡಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಾಲಕನ ಸಮಯ ಪ್ರಜ್ಞೆ:
ಚಾಲಕ ರಾಜೀವ್ ಹೃದಯಾಘಾತ ವಾದ ತಕ್ಷಣ ಚಲಿಸುತ್ತಿದ್ದ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆಯಲ್ಲಿ ನಿಲ್ಲಿಸಿದ ಪರಿಣಾಮ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 45ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ರಕ್ಷಣೆ ನೀಡುವ ಕೆಲಸವನ್ನು ಸಾಯುವ ಸಮಯದಲ್ಲಿ ತೋರಿದ್ದಾರೆ. ಈ ಕುರಿತು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ, ಚಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ.
In a heartbreaking yet heroic incident, a KSRTC (Karnataka State Road Transport Corporation) driver died of a heart attack while driving a Rajahamsa bus, but not before saving the lives of over 45 passengers with his presence of mind and sense of duty.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am