ಬ್ರೇಕಿಂಗ್ ನ್ಯೂಸ್
20-09-25 02:59 pm HK News Desk ಕರ್ನಾಟಕ
ಹಾಸನ, ಸೆ.20 : ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳ ಪ್ರಭಾವ ಹೆಚ್ಚುತ್ತಿದ್ದು ವಿಡಿಯೋದಿಂದ ಕೆಲವರಿಗೆ ಲಾಭ ಆಗಿದ್ದರೆ, ಇನ್ನು ಕೆಲವರು ಟ್ರೋಲ್ ಆಗಿ ಬರ್ಬಾದ್ ಆದವರೂ ಇದ್ದಾರೆ. ಹಾಸನದಲ್ಲಿ ಯುವಕನೊಬ್ಬ ಇದೇ ರೀತಿಯ ಟ್ರೋಲ್ ವಿಡಿಯೋಗೆ ಒಳಗಾಗಿ ಸಾವಿಗೀಡಾದ ಘಟನೆ ನಡೆದಿದೆ.
ಅರಕಲಗೂಡು ತಾಲೂಕಿನ ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿಯಾಗಿದ್ದ ಪವನ್ ಕೆ. (21) ಜೀವ ಕಳಕೊಂಡವ. ಸ್ನೇಹಿತೆಯರೊಂದಿಗೆ ಪಾರ್ಕ್ನಲ್ಲಿ ಕುಳಿತಿದ್ದಾಗ ಯುವತಿಯೊಬ್ಬಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಳು. ಇದರಿಂದ ಮನನೊಂದ ಆತ ಮನೆ ಬಳಿಯ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡ ಘಟನೆ ಹಾಸನದ ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಇಲ್ಲದ ಪವನ್ನನ್ನು ತಾಯಿ ಪುಟ್ಟಲಕ್ಷ್ಮೀ ಗಾರೆ ಕೆಲಸ ಮಾಡಿ ಸಾಕುತ್ತಿದ್ದಳು. ಮಗನನ್ನು ಕಳಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಕೈ ಹಿಡಿದು ಮಾತನಾಡುತ್ತಿದ್ದ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ತನ್ನ ಮೊಬೈಲ್ನಲ್ಲಿ ಸೆರೆಹಿಡಿದಿದ್ದಳು. ನಂತರ ಅದನ್ನು ಇನ್ಸ್ಟಾಗ್ರಾಮ್ನಲ್ಲಿ ಹರಿಬಿಟ್ಟಿದ್ಧು ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿ ಪವನ್ ಸ್ನೇಹಿತರು ಗೇಲಿ ಮಾಡಿದ್ದರು. ವಿಡಿಯೋಗೆ ಆ ಯುವತಿ ವ್ಯಂಗ್ಯದ ಮಾತುಗಳನ್ನು ಶೀರ್ಷಿಕೆ ಕೊಟ್ಟಿದ್ದಳು. ವಿಡಿಯೋವನ್ನು ಇನ್ಸ್ಟಾಗ್ರಾಮ್ನಿಂದ ತೆಗೆದುಹಾಕಲು ಪ್ರಯತ್ನಿಸಿದ್ದ ಜೀವನ್ ಅದು ಸಾಧ್ಯವಾಗದೆ ನೊಂದುಕೊಂಡಿದ್ದ. ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗಿ ದನದ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಪವನ್ ಸಾವಿಗೆ ಕಾರಣಳಾದ ಯುವತಿಯನ್ನು ಬಂಧಿಸುವಂತೆ ಪೋಷಕರು ಆಗ್ರಹಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Hassan A 21-year-old BA final year student from Mosalehosahalli First Grade College in Arakalagudu taluk died by suicide after a video of him sitting with a girl in a park went viral on social media, reportedly leading to trolling and humiliation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am