ಬ್ರೇಕಿಂಗ್ ನ್ಯೂಸ್
22-09-25 03:31 pm HK News Desk ಕರ್ನಾಟಕ
ಮೈಸೂರು, ಸೆ.22 : ಮೈಸೂರು ಒಡೆಯರ್ ಕಾಲದಲ್ಲಿ ಸಿಪಾಯಿ ಮೊಹಮ್ಮದ್ ಗೌಸ್ ಎಂಬವರಿದ್ದರು. ಅವರು ಬೆಳಗೊಳದವರಾಗಿದ್ದು ಸಂಬಂಧದಲ್ಲಿ ನನಗೆ ಮಾವ ಆಗಬೇಕು. ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಜನರಲ್ಲಿ ನಂಬಿಕೆ ಇಟ್ಟಿದ್ದರು. ರಾಜ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಮುಸ್ಲಿಂ ಸೈನಿಕರಿಗೆ ವಹಿಸಿದ್ದರು ಎಂದು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್ ಸ್ಮರಿಸಿಕೊಂಡಿದ್ದಾರೆ.
ನಾವು ಸಾಂವಿಧಾನಿಕ ಮೌಲ್ಯಗಳನ್ನು ಹಾಗೂ ಪರಸ್ಪರರ ನಂಬಿಕೆಗಳನ್ನು ಗೌರವಿಸೋಣ. ಏಕತೆ ಮತ್ತು ಸಮಗ್ರತೆ ಈ ಭೂಮಿಯ ಸುಗಂಧವಾಗಲಿ. ಚಾಮುಂಡೇಶ್ವರಿ ದೇವಿಯ ಆಶೀರ್ವಾದಗಳು ನಮಗೆ ಮಾರ್ಗದರ್ಶನ ನೀಡಲಿ. ಅವರ ಶಕ್ತಿ, ಪ್ರೀತಿ ಮತ್ತು ಧೈರ್ಯವು ನಮ್ಮೊಳಗಿನ ದ್ವೇಷ ಮತ್ತು ಅಸಹಿಷ್ಣುತೆಯನ್ನು ಜಯಿಸಲು ನಮಗೆ ಸಹಾಯ ಮಾಡಲಿ.
ಈ ದಸರಾ ಹಬ್ಬವು ರಾಜ್ಯ ಮತ್ತು ರಾಷ್ಟ್ರದ ಗಡಿಗಳನ್ನು ಮೀರಿ, ಪ್ರಪಂಚದಾದ್ಯಂತ ಶಾಂತಿ, ಸಾಮರಸ್ಯ ಮತ್ತು ನ್ಯಾಯದ ಬೆಂಕಿಯನ್ನು ಹೊತ್ತಿಸಲಿ. ನಮ್ಮ ಸಂಸ್ಕೃತಿ ನಮ್ಮ ಬೇರು, ಸೌಹಾರ್ದ ನಮ್ಮ ಶಕ್ತಿ, ಆರ್ಥಿಕತೆಯೇ ನಮ್ಮ ರೆಕ್ಕೆ, ವಿಶ್ವಕ್ಕೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಂದು ಚಿಗುರು ನಮ್ಮ ಎದೆಯಲ್ಲಿ ಒಡೆಯಲಿ ಎಂದು ಹೇಳಿದರು.
ಚಾಮುಂಡೇಶ್ವರಿ ಎಂದರೆ ಹೆಣ್ಣಿನಲ್ಲಿರುವ ಅಪಾರ ಶಕ್ತಿ. ಸ್ತ್ರೀತ್ವ ಎಂದರೆ ಕೇವಲ ಮೃದುತ್ವ, ತಾಳ್ಮೆ ಎಂಬಯದಷ್ಟೇ ಅಲ್ಲ. ಗಟ್ಟಿ ಬದುಕಿನ ಹೋರಾಟ ಎಂಬುದನ್ನು ನಾವು ಅರಿಯಬೇಕಿದೆ. ಸಂಪತ್ತು ಹಂಚಿಕೊಂಡರೆ ವೃದ್ಧಿಯಾಗುತ್ತದೆ, ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘ ಕಾಲ ಬದುಕುತ್ತದೆ ಎಂದು ಒಡೆಯರ್ ಹೇಳಿದ್ದರು.
ನಾನು ಇದುವರೆಗೂ ಸುಮಾರು ಕಾರ್ಯಕ್ರಮ ನಡೆಸಿದ್ದೇನೆ, ಆಹ್ವಾನಿತಳಾಗಿದ್ದೇನೆ. ನೂರಾರು ಸಾರಿ ದೀಪಗಳನ್ನು ಬೆಳಗಿಸಿದ್ದೇನೆ, ನೂರಾರು ಸಾರಿ ಪುಷ್ಪಾರ್ಚನೆ ಮಾಡಿದ್ದೇನೆ, ಮಂಗಳಾರತಿ ಕೂಡ ಸ್ವೀಕರಿಸಿದ್ದೇನೆ. ನಾಳೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬುಕರ್ ಬಾನು ಬದುಕು ಬರಹ ಎಂಬ ಪುಸ್ತಕ ಪ್ರಕಟವಾಗುತ್ತಿದೆ. ಅದರಲ್ಲಿ ನನ್ನ ಆತ್ಮಕಥೆಯ ಒಂದು ಭಾಗ ಪ್ರಕಟವಾಗಲಿದೆ. ಅದರಲ್ಲಿ ನನ್ನ ಮತ್ತು ಹಿಂದು ಧರ್ಮದೊಂದಿಗಿನ ಸಂಬಂಧ, ಬಾಂಧವ್ಯ ಹೇಗಿದೆ ಎಂಬುದನ್ನು ನಾನು ಬರೆದಿದ್ದೇನೆ ಎಂದು ಹೇಳಿದರು.
ಹುಟ್ಟಿನಿಂದ ಮುಸ್ಲಿಂ, ಆದರೆ ಅವರೂ ಮನುಷ್ಯರು !
ಬಾನು ಮುಷ್ತಾಕ್ ಹುಟ್ಟಿನಿಂದ ಮುಸಲ್ಮಾನರು. ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಅವರು ಮನುಷ್ಯರು. ದೇಶದ ಸಂವಿಧಾನ ಮೇಲೆ ನಂಬಿಕೆ ಇರುವವರು. ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿಯನ್ನು ನಮ್ಮ ಕನ್ನಡ ಸಾಹಿತ್ಯಕ್ಕೆ ತಂದುಕೊಟ್ಟಿದ್ದಾರೆ. ಅವರು ಇಂದು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ಆವರಣದಲ್ಲಿ ಲೇಖಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ, ಬಾನು ಮುಷ್ತಾಕ್ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದ್ದರೂ ಅವರನ್ನು ಒಬ್ಬ ಮನುಷ್ಯರನ್ನಾಗಿ ನೋಡೋಣ. ನಾವು ಒಬ್ಬರನ್ನೊಬ್ಬರು ಮನುಷ್ಯರಂತೆ ಗೌರವಿಸಬೇಕು ಮತ್ತು ಧಾರ್ಮಿಕ ದ್ವೇಷದ ಆಧಾರದ ಮೇಲೆ ತಾರತಮ್ಯ ಮಾಡಬಾರದು.
ನಾವು ಮಾನವೀಯತೆಯನ್ನು ಒಂದಾಗಿ ಸ್ವೀಕರಿಸುತ್ತಿದ್ದರೆ, ಬಾನು ಮುಷ್ತಾಕ್ ದಸರಾ ಉತ್ಸವದ ಉದ್ಘಾಟನೆಯನ್ನು ನಾವು ಒಪ್ಪಿಕೊಳ್ಳಬೇಕು. ಕರ್ನಾಟಕದ ಬಹುಪಾಲು ಜನರು ಇದನ್ನು ಪೂರ್ಣ ಹೃದಯದಿಂದ ಸ್ವಾಗತಿಸಿದ್ದಾರೆ ಎಂದರು.
ದಸರಾ ಆಚರಣೆಯ ಹಿನ್ನೆಲೆಯನ್ನು ವಿವರಿಸಿದ ಸಿಎಂ, ನಾವು ನಮ್ಮ ಇತಿಹಾಸವನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಬಾಬಾಸಾಹೇಬ್ ಅಂಬೇಡ್ಕರ್ 'ಇತಿಹಾಸ ತಿಳಿದಿಲ್ಲದವರು ಭವಿಷ್ಯವನ್ನು ನಿರ್ಮಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳುತ್ತಿದ್ದರು. ನಮ್ಮ ಸಂವಿಧಾನವನ್ನು ನಾವೆಲ್ಲರೂ ತಿಳಿದುಕೊಳ್ಳಬೇಕೆಂದು ಖಚಿತಪಡಿಸಿಕೊಳ್ಳಲು, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಮತ್ತು ನಾನು ಚರ್ಚಿಸಿ ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆವು ಎಂದರು.
Booker Prize-winning author Banu Mushtaq, inaugurating the Mysuru Dasara festivities, highlighted the inclusive legacy of the Wadiyars and the symbolic power of Goddess Chamundeshwari.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm