ಬ್ರೇಕಿಂಗ್ ನ್ಯೂಸ್
01-10-25 10:06 pm HK News Desk ಕರ್ನಾಟಕ
ಹಾಸನ, ಅ.1 : ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಸುದರ್ಶನ್ (32) ಮತ್ತು ಕಾವ್ಯಾ (28) ಮೃತ ದಂಪತಿ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳವಾರ ತಡರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಅವರ ಮನೆಯಲ್ಲಿ ಸೋಮವಾರ ರಾತ್ರಿ ನಿಗೂಢ ಸ್ಫೋಟ ಸಂಭವಿಸಿತ್ತು.
ಆರಂಭದಲ್ಲಿ ಇದು ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು. ಸ್ಥಳದಲ್ಲಿ ಎಫ್ಎಸ್ಎಲ್ ಪರಿಶೀಲನೆ ನಡೆಸಲಾಗಿದ್ದು ಯಾವ ಸ್ಫೋಟಕದಿಂದ ಘಟನೆ ಸಂಭವಿಸಿದೆ ಎಂಬ ನಿಖರ ಮಾಹಿತಿ ತಿಳಿಯಲಿದೆ. ಇದೇ ವೇಳೆ, ಸಿಡಿಮದ್ದಿಗೆ ಬಳಸುವ ಸ್ಫೋಟಕ ಸಾಮಗ್ರಿ ಸಿಡಿದಿರುವ ಶಂಕೆ ವ್ಯಕ್ತವಾಗಿದೆ. ಸುದರ್ಶನ್ ಅವರ ಪತ್ನಿ ಕಾವ್ಯಾ ಕುಟುಂಬಕ್ಕೆ ಸಿಡಿಮದ್ದು ತಯಾರಿ ಉದ್ಯಮದ ವ್ಯವಹಾರ ಇರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಕಿಟಕಿ ಒಡೆದು ಛಿದ್ರಗೊಂಡಿದ್ದು ಭಾರೀ ಪ್ರಮಾಣದ ಸ್ಫೋಟ ಉಂಟಾಗಿರುವುದಕ್ಕೆ ಸಾಕ್ಷಿಯಾಗಿದೆ. ಹಾಸನ ಎಸ್ಪಿ ಮೊಹಮ್ಮದ್ ಸಜಿತಾ ಸ್ಥಳಕ್ಕೆ ಭೇಟಿ ನೀಡಿ, ತನಿಖೆಯ ಉಸ್ತುವಾರಿ ವಹಿಸಿದ್ದಾರೆ.
ಸೋಮವಾರ ರಾತ್ರಿ 8.30ರ ಸುಮಾರಿಗೆ, ಮಗ, ಸೊಸೆ ಮತ್ತು ಮೊಮ್ಮಕ್ಕಳು ಮನೆಯಲ್ಲಿದ್ದಾಗ, ಶೌಚಾಲಯ ಪ್ರದೇಶದ ಬಳಿ ಸ್ಫೋಟ ಉಂಟಾಗಿತ್ತು ಎಂದು ಮೃತ ಸುದರ್ಶನ್ ತಂದೆ ಮೋಹನ್ ಕುಮಾರ್ ಪೊಲೀಸ್ ದೂರು ನೀಡಿದ್ದರು. ಸ್ಫೋಟದಲ್ಲಿ ಮಗ ಮತ್ತು ಸೊಸೆಗೆ ತೀವ್ರ ಗಾಯಗಳಾಗಿದ್ದವು. ಮನೆಯ ಲಾಬಿಯಲ್ಲಿದ್ದ ಮೋಹನ್ ಕುಮಾರ್ ಮತ್ತು ಮೊಮ್ಮಕ್ಕಳು ಅಪಾಯದಿಂದ ಪಾರಾಗಿದ್ದರು. ಕಾವ್ಯಾ ಮತ್ತು ಸುದರ್ಶನ್ ಮನೆಯ ಪ್ಯಾಸೇಜ್ ಪ್ರದೇಶದಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಈ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A late-night explosion in Alur taluk, Hassan district, has left a young couple—Sudarshan (32) and Kavya (28)—dead after succumbing to severe burn injuries at Bengaluru’s Victoria Hospital. Initially suspected to be a cylinder blast, police now believe firecracker-related explosives may have triggered the powerful explosion.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am