ಬ್ರೇಕಿಂಗ್ ನ್ಯೂಸ್
06-10-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಅ.6 : ರಾಜ್ಯದಲ್ಲಿ ಜಾತಿ ಗಣತಿ ಅವಧಿ ವಿಸ್ತರಣೆಯಾಗಿದ್ದು ರಾಜ್ಯಾದ್ಯಂತ ಶಾಲೆಗಳ ಸಮಯವನ್ನು ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೆ ಬೆಳಗ್ಗೆ 8ರಿಂದ ತೊಡಗಿ ಮಧ್ಯಾಹ್ನ 1 ಗಂಟೆ ವರೆಗೆ ಮಾತ್ರ ತರಗತಿ ನಡೆಸಲು ಸೂಚಿಸಿದೆ.
ರಾಜ್ಯಾದ್ಯಂತ ಜಾತಿ ಗಣತಿ ಸೆಪ್ಟೆಂಬರ್ 22 ರಿಂದ ನಡೆಯುತ್ತಿದ್ದು, ಶಾಲಾ ಶಿಕ್ಷಕರು, ಉಪನ್ಯಾಸಕರು ಸಮೀಕ್ಷೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಗಣತಿಯನ್ನು ಅಕ್ಟೋಬರ್ 7 ರ ಒಳಗೆ ಮುಗಿಸಲು ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದಿದ್ದರಿಂದ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಮಧ್ಯಾಹ್ನ ವರೆಗೆ ಶಾಲಾ ತರಗತಿ ನಡೆಸಿ ಆಬಳಿಕ ಸಮೀಕ್ಷೆ ಕಾರ್ಯಕ್ಕೆ ತೆರಳಲಿದ್ದಾರೆ. ಶಾಲಾ ಸಮಯ ಬದಲಾವಣೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ಅನ್ವಯವಾಗಲಿದೆ.
ರಾಜ್ಯದಲ್ಲಿ (ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್ 8 ರಿಂದ 12 ರ ವರೆಗೆ ತರಗತಿಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಸಲು ಸೂಚಿಸಲಾಗಿದೆ. ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಸೂಚನೆ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್ 8 ರಿಂದ 24 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿ ನಡೆಯಲಿವೆ. ಆ ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸಬೇಕಿದೆ. ಸಮೀಕ್ಷೆಯನ್ನು ಅಕ್ಟೋಬರ್ 12 ರ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಗ್ರೇಟರ್ ಬೆಂಗಳೂರಿನಲ್ಲಿ ಅಕ್ಟೋಬರ್ 24 ರೊಳಗೆ ಪೂರ್ಣಗೊಳಿಸಬೇಕು ಎಂದು ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಗಡುವು ನೀಡಿದೆ.
With the ongoing caste census extended beyond the earlier deadline, the Karnataka Department of School Education has issued an order revising school timings across the state. Government and aided schools will now function only from 8 a.m. to 1 p.m. starting October 8.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am