ಬ್ರೇಕಿಂಗ್ ನ್ಯೂಸ್
20-10-25 06:58 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ 33,000 ಕೋಟಿ ರೂಪಾಯಿ ಮೊತ್ತದ ಕಾಮಗಾರಿ ಬಿಲ್ ಬಾಕಿಯಾಗಿದ್ದು, ತಕ್ಷಣವೇ ಪಾವತಿಸಬೇಕು. ಇಲ್ಲದಿದ್ದರೆ ಡಿಸೆಂಬರ್ ಮೊದಲ ವಾರದಿಂದ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್, "ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ನಾವು ಹಣ ಬಿಡುಗಡೆಗೆ ಕೇಳುತ್ತಿದ್ದೇವೆ. ಮುಖ್ಯಮಂತ್ರಿಗಳನ್ನು 2 - 3 ಬಾರಿ ಭೇಟಿ ಆಗಿದ್ದೇವೆ. ಅವರು ಭರವಸೆ ನೀಡುತ್ತಾರೆ, ಆದರೆ ಹಣ ನೀಡುವುದಿಲ್ಲ. ಕೇವಲ ಶೇ.10 - 15ರಷ್ಟು ಹಣವನ್ನು ಮಾತ್ರ ಪಾವತಿಸುತ್ತಿದ್ದಾರೆ. ನಾವು ನವೆಂಬರ್ ಅಂತ್ಯದ ವರೆಗೆ ಕಾಯುತ್ತೇವೆ, ಆನಂತರ ಪ್ರತಿಭಟನೆ ನಡೆಸಿ ಕೆಲಸ ಸ್ಥಗಿತಗೊಳಿಸುತ್ತೇವೆ ಎಂದರು.
![]()
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ದೀಪಾವಳಿ ಹಬ್ಬದ ವರೆಗೆ ಕಾಯುವಂತೆ ಹೇಳಿದೆ ಎಂದು ಹೇಳಿದರು. ಮಂಜುನಾಥ್ ಅವರ ಪ್ರಕಾರ, ಮೇ 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ 52,000 ಕೋಟಿ ರೂ. ಬಾಕಿ ಇತ್ತು. ಈಗ ಎಂಟು ಇಲಾಖೆಗಳಿಂದ ಸುಮಾರು 33,000 ಕೋಟಿ ರೂ. ಬಾಕಿ ಇದೆ. ಸಮಾಜ ಕಲ್ಯಾಣ ಇಲಾಖೆ ಹೊರತುಪಡಿಸಿ, ಬೇರೆ ಯಾವ ಇಲಾಖೆಯೂ ಹಿರಿಯ ಗುತ್ತಿಗೆದಾರರಿಗೆ ಆದ್ಯತೆ ನೀಡುತ್ತಿಲ್ಲ ಎಂದು ಅವರು ಹೇಳಿದರು. ನಗರ ಅಭಿವೃದ್ಧಿ ಇಲಾಖೆಯು 10 ನಗರ ಮಹಾನಗರ ಪಾಲಿಕೆಗಳಲ್ಲಿ ನೀಡುತ್ತಿರುವ ಪ್ಯಾಕೇಜ್ ಟೆಂಡರ್ಗಳು ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಅನ್ಯಾಯ ಮಾಡುತ್ತಿವೆ. ಸಚಿವರಾದ ಬೈರತಿ ಸುರೇಶ್ ಅವರನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ಹೇಳಿದರು. ಸಿದ್ದರಾಮಯ್ಯನವರು ಪ್ಯಾಕೇಜ್ ಟೆಂಡರ್ಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಅತಿ ಹೆಚ್ಚು ಅಂದರೆ 12,000 ಕೋಟಿ ರೂಪಾಯಿ ಡಿಕೆ ಶಿವಕುಮಾರ್ ನಿರ್ವಹಿಸುತ್ತಿರುವ ಮಹಾ ನೀರಾವರಿ ಇಲಾಖೆಗೆ ಸೇರಿದೆ. ನಂತರ, ಪಿಡಬ್ಲ್ಯೂಡಿ ಇಲಾಖೆಯಿಂದ 9,000 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 3,600 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ 3,200 ಕೋಟಿ, ನಗರ ಅಭಿವೃದ್ಧಿ ಇಲಾಖೆಯಿಂದ 2,000 ಕೋಟಿ, ವಸತಿ ಇಲಾಖೆಯಿಂದ 1,500 ಕೋಟಿ, ಕಾರ್ಮಿಕ ಇಲಾಖೆಯಿಂದ 800 ಕೋಟಿ ರೂಪಾಯಿಗಳು ಬಾಕಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.
The Karnataka State Contractors’ Association has warned of statewide protests starting in early December if the state government fails to clear pending bills totaling ₹33,000 crore across various departments. Association president R. Manjunath said despite repeated assurances from Chief Minister Siddaramaiah, only 10–15% of payments have been released so far.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am