ಬ್ರೇಕಿಂಗ್ ನ್ಯೂಸ್
25-10-25 09:33 pm Bangalore Correspondent ಕರ್ನಾಟಕ
ಬೆಂಗಳೂರು, ಅ.25 : ಪ್ರೀತಿಸುವ ನೆಪದಲ್ಲಿ ಹಿಂದೂ ಯುವತಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮದುವೆಯಾಗಬೇಕಿದ್ದರೆ ಮತಾಂತರ ಆಗಬೇಕೆಂದು ಮುಸ್ಲಿಂ ಯುವಕನೊಬ್ಬ ಒತ್ತಡ ಹೇರಿದ ಬಗ್ಗೆ ಎಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿ ಪೊಲೀಸ್ ದೂರು ನೀಡಿದ್ದು, ಮಹಮ್ಮದ್ ಇಶಾಕ್ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್ಸ್ಟಾಗ್ರಾಂ ಮೂಲಕ ಮೊಹಮ್ಮದ್ ಇಶಾಕ್ ಬಿನ್ ಅಬ್ದುಲ್ ರಸೂಲ್ ಎಂಬಾತ ಯುವತಿಗೆ ಪರಿಚಯವಾಗಿದ್ದು, ಬಳಿಕ ಪ್ರೀತಿಯಾಗಿ ಮಾರ್ಪಟ್ಟಿತ್ತು. 2024ರ ಅಕ್ಟೋಬರ್ 30ರಂದು ಬೆಂಗಳೂರಿನ ಧಣಿಸಂದ್ರದಲ್ಲಿರುವ ಎಲಿಮೆಂಟ್ಸ್ ಮಾಲ್ ಹತ್ತಿರ ಇಬ್ಬರೂ ಭೇಟಿಯಾಗಿದ್ದು, ಮದುವೆ ಬಗ್ಗೆ ಮಾತುಕತೆ ನಡೆಸಿದ್ದರು. ಅಲ್ಲಿಂದ ಆತ ಯುವತಿಯನ್ನ ಖಾಸಗಿ ಲಾಡ್ಜ್ ಗೆ ಕರೆದೊಯ್ದಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಇದೇ ರೀತಿ ಇಬ್ಬರೂ ಹಲವು ಬಾರಿ ಪರಸ್ಪರ ಲೈಂಗಿಕ ಕ್ರಿಯೆ ನಡೆಸಿದ್ದಾರೆ.
ಆದರೆ ಮೊಹಮ್ಮದ್ ಇಶಾಕ್ ಹಲವು ಹುಡುಗಿಯರ ಜೊತೆಗೆ ಸಂಪರ್ಕದಲ್ಲಿ ಇರೋದು 2025ರ ಸೆಪ್ಟಂಬರ್ ವೇಳೆಗೆ ಯುವತಿಗೆ ಗೊತ್ತಾಗಿದೆ. ಹೀಗಾಗಿ ತನ್ನನ್ನು ಕೂಡಲೇ ಮದುವೆಯಾಗುವಂತೆ ಬೇಡಿಕೆ ಇಟ್ಟಿದ್ದಾಳೆ. ಆದರೆ ಯುವಕ ಬೇರೆ ಬೇರೆ ನೆಪ ಹೇಳಿಕೊಂಡು ದಿನಗಳನ್ನು ದೂಡುತ್ತಿದ್ದ. ಇದೇ ವೇಳೆ, ಇಶಾಕ್ ಗೆ ಬೇರೆ ಮುಸ್ಲಿಂ ಹುಡುಗಿ ಜೊತೆ ನಿಶ್ಚಿತಾರ್ಥ ನಡೆದಿದೆ. ಇದನ್ನು ಪ್ರಶ್ನಿಸಿದಾಗ ನಿನ್ನ ದಾರಿ ನೀನು ನೋಡಿಕೋ.. ನನ್ನ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲವೆಂದು ಕೊಲೆ ಬೆದರಿಕೆ ಹಾಕಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಲ್ಲಿ ತಿಳಿಸಲಾಗಿದೆ.
ಇದೇ ವಿಚಾರವಾಗಿ ಸಂತ್ರಸ್ತ ಯುವತಿ ಒಮ್ಮೆ ಆತ್ಮಹತ್ಯೆಗೂ ಯತ್ನಿಸಿದ್ದು, ಈ ವೇಳೆ ಇಶಾಕ್ ಕುಟುಂಬದವರು ಕರೆ ಮಾಡಿದ್ದರು ಎನ್ನಲಾಗಿದೆ. ಸೂಸೈಡ್ ಅಥವಾ ಕೇಸು ಮಾಡುವಂತಹ ದುಡುಕುತನ ಬೇಡ. ಪರಸ್ಪರ ಮಾತನಾಡಿ ಬಗೆಹರಿಸೋಣ ಎಂದಿದ್ದರು. ಆನಂತರ ಇಶಾಕ್ ಅಣ್ಣ ಮತ್ತು ಭಾವ ಬಂದು ಮದುವೆ ಆಗಬೇಕಂದರೆ ನೀನು ಇಸ್ಲಾಮಿಗೆ ಮತಾಂತರ ಆಗಬೇಕು. 40 ದಿನ ಸಮಯಾವಕಾಶ ಇರಲಿದ್ದು, ನಮಾಜ್ ಮಾಡಲು ಕಲಿಯಬೇಕು. ಮೊದಲು ಮತಾಂತರ ಆಗು, ಆ ಬಳಿಕ ಮದುವೆ ಬಗ್ಗೆ ಮಾತಾಡೋಣ ಎಂದಿದ್ದರು. ಘಟನೆಯಿಂದ ನೊಂದಿರುವ ಯುವತಿ ಪೊಲೀಸ್ ದೂರು ನೀಡಿದ್ದು ಲವ್ ಜಿಹಾದ್ ನಡೆಸಿರುವ ಆರೋಪ ಕೇಳಿಬಂದಿದೆ.
A Muslim youth has been booked in Bengaluru on charges of cheating and religious coercion after allegedly pressuring a Hindu woman to convert to Islam to marry him. The incident came to light when the victim lodged a complaint at the HSR Layout Police Station against the accused, identified as Mohammed Ishaq Bin Abdul Rasool.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am