ಬ್ರೇಕಿಂಗ್ ನ್ಯೂಸ್
27-10-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : "ನವೆಂಬರ್ ಕ್ರಾಂತಿ" ಮತ್ತು ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿಗಳನ್ನು ತಳ್ಳಿಹಾಕಿರುವ ಸಚಿವ ಸತೀಶ್ ಜಾರಕಿಹೊಳಿ, ಪಕ್ಷದ ಹೈಕಮಾಂಡ್ ಅಂತಹ ಯಾವುದೇ ಕ್ರಾಂತಿಗೆ ಅವಕಾಶ ನೀಡುವುದಿಲ್ಲ. ಮತ್ತು ಕರ್ನಾಟಕದಲ್ಲಿ ಯಾರು ಕೂಡ ಶಿಂಧೆ, ಪವಾರ್ ಆಗಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕನಾಥ್ ಶಿಂಧೆ ಒಬ್ಬರೇ, ಅಜಿತ್ ಪವಾರ್ ಕೂಡ ಒಬ್ಬರೇ. ಮತ್ತೊಬ್ಬ ಏಕನಾಥ್ ಶಿಂಧೆ ಅಥವಾ ಪವಾರ್ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದರು. ಈ ಮೂಲಕ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಂಡಾಯವೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ಸಚಿವ ಸಂಪುಟ ಪುನರ್ರಚನೆ ಮತ್ತು ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತ, "ನಾನು ಈ ಬಗ್ಗೆ ಹಲವು ಬಾರಿ ಹೇಳಿದ್ದೇನೆ, ನನಗೆ ಅದರ ಬಗ್ಗೆ ಗೊತ್ತಿಲ್ಲ. ಇದನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ನಿರ್ಧರಿಸಲಾಗುತ್ತದೆ. ಆದ್ದರಿಂದ ನಾನು ಇದರ ಬಗ್ಗೆ ಏನನ್ನೂ ಹೇಳಲಾರೆ" ಎಂದರು.
ನವೆಂಬರ್ ಕ್ರಾಂತಿಯ ಬಗ್ಗೆಯೂ ನನಗೆ ಗೊತ್ತಿಲ್ಲ. ಪಕ್ಷವಿದೆ ಮತ್ತು ಹೈಕಮಾಂಡ್ ಇದೆ. ಅವರು ಯಾವುದೇ ಕ್ರಾಂತಿಗೆ ಏಕೆ ಅವಕಾಶ ನೀಡುತ್ತಾರೆ? ಅವರು ಅದಕ್ಕೆ ಅನುಮತಿಸುವುದಿಲ್ಲ" ಎಂದು ಹೇಳಿದರು. ಮಹಾರಾಷ್ಟ್ರ ಮಾದರಿಯಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯಲಿದೆ ಎಂದು ವಿಪಕ್ಷಗಳು ಭವಿಷ್ಯ ನುಡಿದಿವೆ. ಕರ್ನಾಟಕದಲ್ಲಿ ಏಕನಾಥ ಶಿಂಧೆ ಹಾಗೂ ಅಜಿತ್ ಪವಾರ್ ರೀತಿಯಲ್ಲಿ ನಾಯಕತ್ವ ಹುಟ್ಟಿಕೊಳ್ಳುತ್ತದೆಯೇ? ಎಂದು ಕೇಳಿದಾಗ, ಅಂತಹ ಪ್ರಯತ್ನ ಅಸಾಧ್ಯ ಎಂದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಪಕ್ಷ ಮತ್ತು ಸರ್ಕಾರದಿಂದ ಪ್ರತ್ಯೇಕವಾದ ಅಹಿಂದ ಚಳುವಳಿಯನ್ನು ಮುನ್ನಡೆಸುವ ಬಗ್ಗೆ ಮಾತನಾಡಿದ್ದಾರೆ. ಇದಕ್ಕೂ, ಮುಖ್ಯಮಂತ್ರಿ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ನಾನು ಸಿಎಂ ಹುದ್ದೆ ಅಥವಾ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಕೇಳಿಲ್ಲ ಮತ್ತು ಅವರು (ಯತೀಂದ್ರ) ಕೂಡ ಸಿಎಂ ಅಥವಾ ಪಕ್ಷದ ಅಧ್ಯಕ್ಷ ಹುದ್ದೆಯ ಬಗ್ಗೆ ಮಾತನಾಡಲಿಲ್ಲ ಎಂದು ಹೇಳಿದರು.
Rejecting speculations about a possible “November Revolution” and leadership change in the Congress, Minister Satish Jarkiholi asserted that the party high command will not allow any such rebellion in Karnataka.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am