ಬ್ರೇಕಿಂಗ್ ನ್ಯೂಸ್
27-10-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ತೆರಳಿದ್ದರು. ಆದರೆ, ದೆಹಲಿಯಲ್ಲಿ ಡಿಕೆಶಿಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅವರು ಬರಿಗೈಲಿ ವಾಪಸಾಗಿದ್ದಾರೆ.
ನವೆಂಬರ್ ಕ್ರಾಂತಿ ವದಂತಿಗೆ ಪೂರಕವಾಗಿ ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಉತ್ತರಾಧಿಕಾರಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂಬಮದು ಸ್ಫೋಟಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಚರ್ಚೆ, ವಿವಾದ ಎದ್ದಿರುವಾಗಲೇ ಭಾನುವಾರ ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರು. ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಕೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಡಿಕೆ ಭೇಟಿಗೆ ಸಿಗದೆ ರಾಹುಲ್ ಭೇಟಿ ತಪ್ಪಿಸಿದ್ದಾರೆ.
ರಾಹುಲ್ ಗಾಂಧಿ ಬಿಹಾರ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆಂಬ ನೆಪದಲ್ಲಿ ಡಿಕೆಶಿ ಭೇಟಿ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಹೊರಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೂ ದೆಹಲಿಯಲ್ಲಿ ಇಲ್ಲವೆಂದು ಹೇಳಿ ಡಿಕೆ ಭೇಟಿಯಿಂದ ದೂರ ಸರಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಮತ್ತೆ ನವೆಂಬರ್ 11ಕ್ಕೆ ಡಿಕೆಶಿ ದೆಹಲಿ ಭೇಟಿ ನೀಡಲಿದ್ದಾರೆಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು ಡಿಸಿಎಂ ಡಿಕೆಶಿ ಪರ ಮಾತಾಡೊದ್ರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯರ ಪರವೂ ಶಾಸಕರು ಮಾತಾಡ್ತಾರೆ. ಶಾಸಕರು ಗೆದ್ದು ಬಂದಿರುತ್ತಾರೆ, ಅವರ ಅಭಿಪ್ರಾಯಕ್ಕೂ ಬೆಲೆ ಇದೆ ಎಂದು ಸಮರ್ಥಿಸಿಕೊಂಡರು. ಸಿಎಂ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ, ಹೈಕಮಾಂಡ್ ಅಭಿಪ್ರಾಯವೂ ಮುಖ್ಯ. ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಆಧಾರ ಸ್ತಂಭ. ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಇದ್ದೇ ಇರುತ್ತದೆ ಎಂದರು.
As political circles buzz with talk of a possible change in leadership in Karnataka, Deputy Chief Minister D.K. Shivakumar’s sudden Delhi visit has drawn attention — but ended without any significant outcome.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am