ಬ್ರೇಕಿಂಗ್ ನ್ಯೂಸ್
06-11-25 03:06 pm Bangalore Correspondent ಕರ್ನಾಟಕ
ಬೆಂಗಳೂರು, ನ.6 : ಹೆಸರಾಂತ ಪೋಷಕ ನಟ, ಕನ್ನಡ ಚಿತ್ರಗಳಲ್ಲಿ ವಿಲನ್ ಪಾತ್ರಗಳ ಮೂಲಕ ಮಿಂಚಿದ್ದ ಹಿರಿಯ ನಟ ಹರೀಶ್ ರಾಯ್(55) ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
90ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಉಡುಪಿ ಮೂಲದ ಹರೀಶ್ ರಾಯ್, ಶಿವರಾಜ್ ಕುಮಾರ್ ನಟನೆಯ ಓಂ ಚಿತ್ರದಲ್ಲಿ ಡಾನ್ ಆಗಿ, ಕೆಜಿಎಫ್ ಚಿತ್ರದಲ್ಲಿ ಚಾಚಾನಾಗಿ ಹೆಸರು ಮಾಡಿದ್ದರು. ಇತ್ತೀಚೆಗೆ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಶಿವಣ್ಣ, ಯಶ್ ಸೇರಿದಂತೆ ಅನೇಕರು ಆರ್ಥಿಕ ನೆರವು ನೀಡಿದ್ದರು. ಕೊನೆಗೂ ಕ್ಯಾನ್ಸರ್ ವಿರುದ್ಧ ಗೆಲ್ಲಲು ಹರೀಶ್ ರಾಯ್ ಅವರಿಗೆ ಸಾಧ್ಯವಾಗಲಿಲ್ಲ.


90 ರ ದಶಕದಲ್ಲಿ ಕನ್ನಡ, ತಮಿಳಿನ ಹಲವು ಸಿನಿಮಾಗಳಲ್ಲಿ ಖಳ ನಾಯಕನ ಪಾತ್ರದಲ್ಲಿ ಹರೀಶ್ ರಾಯ್ ನಟಿಸಿದ್ದರು. ರಾಜ್ ಬಹದ್ದೂರ್, ನನ್ನ ಕನಸಿನ ಹೂವೆ, ಮೀಂದುಮ್ ಒರು ಕಾದಲ್ ಕಥೈ, ಜೋಡಿ ಹಕ್ಕಿ, ತಾಯವ್ವ, ಅಂಡರ್ ವರ್ಲ್ಡ್, ನಲ್ಲ, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ ಸೇರಿದಂತೆ ಕನ್ನಡ ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಹರೀಶ್ ರಾಯ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕ್ಯಾನ್ಸರ್ ವಿರುದ್ಧ ಹೋರಾಡಲು ಅವರಿಗೆ ದುಬಾರಿ ಬೆಲೆಯ 17 ಇಂಜೆಕ್ಷನ್‌ಗಳ ಅವಶ್ಯಕತೆ ಇತ್ತು. ಅದಕ್ಕಾಗಿ ಸುಮಾರು 70 ಲಕ್ಷಕ್ಕೂ ಅಧಿಕ ರೂ. ಅಗತ್ಯವಿತ್ತು ಎನ್ನಲಾಗಿತ್ತು. ಒಂದು ಇಂಜೆಕ್ಷನ್ ಬೆಲೆ 3.50 ಲಕ್ಷ ರೂ. ಎಂದೂ ಹೇಳಲಾಗಿತ್ತು. ಅವರಿಗೆ ಇತ್ತೀಚೆಗೆ ಒಂದು ಇಂಜೆಕ್ಷನ್ ನೀಡಲಾಗಿತ್ತು. ಆದರೆ ಇಂಜೆಕ್ಷನ್‌ಗೆ ಅವರ ದೇಹ ಸಹಕರಿಸದೇ ಇದ್ದುದರಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ನಿಶ್ಯಕ್ತಿಯಿಂದ ಬಳಲುತ್ತಿದ್ದ ಅವರನ್ನ ಐಸಿಯುನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
Veteran Kannada actor Harish Rai (55), who gained fame for his villainous roles in films like Om and KGF, passed away in Bengaluru after battling thyroid cancer. The actor was undergoing treatment at Kidwai Memorial Institute of Oncology.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am