ಬ್ರೇಕಿಂಗ್ ನ್ಯೂಸ್
21-11-25 05:25 pm HK News Desk ಕರ್ನಾಟಕ
ಮೈಸೂರು, ನ.21 : ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾವೆಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ಆದರೆ ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.
ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಮತ್ತು ಮುಂದಿನ ಎರಡು ಬಜೆಟನ್ನೂ ನಾನೇ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ದೆಹಲಿಗೆ ತೆರಳಿರುವ ಶಾಸಕರ ಟೀಮಿಗೂ ಸಂದೇಶ ರವಾನಿಸಿದ್ದಾರೆ.
ಸಿಎಂ ಆಗಿ ನಾನೇ ಐದು ವರ್ಷ ಕಾಲ ಮುಂದುವರಿಯುತ್ತೇನೆ. ಇನ್ನು ಎರಡು ಬಜೆಟ್ ನಾನೇ ಮಂಡಿಸುತ್ತೇನೆ. ಆದರೆ ಹೈಕಮಾಂಡ್ ಏನು ಹೇಳಿದರೂ ಕೇಳಬೇಕಾಗುತ್ತದೆ, ಡಿಕೆ ಶಿವಕುಮಾರ್ ಅವರೂ ಕೇಳಬೇಕು. ಹೈಕಮಾಂಡ್ ಮಾತಿಗೆ ನಾವು ಬದ್ಧ. ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಹೇಳಿಲ್ಲ ಎಂದ ಮೇಲೆ ನೀವು ಯಾಕೆ ಪದೇ ಪದೇ ಕೇಳಬೇಕು ಎಂದು ತಿವಿದಿದ್ದಾರೆ.
ಇದೇ ವೇಳೆ ಡಿಕೆ ಶಿವಕುಮಾರ್ ಅವರ ಸಹೋದರ ಡಿ.ಕೆ ಸುರೇಶ್ ಅವರು "ಸಿದ್ದರಾಮಯ್ಯ ಎಂದಿಗೂ ಮಾತು ತಪ್ಪಲ್ಲ" ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ಹೌದು, ನಾನು ಮಾತಿಗೆ ತಪ್ಪಲ್ಲ. ರಾಜ್ಯದಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ. ನಾನೇ ಸಿಎಂ ಆಗಿಯೂ ಮುಂದುವರಿಯುತ್ತೇನೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು. ಶಾಸಕರು ಹೇಳಿಕೆ ಕೊಡುತ್ತಿರುವುದರಿಂದ ಗೊಂದಲಕ್ಕೆ ಕಾರಣವಾಗುತ್ತಿದೆ ಎಂಬ ಪ್ರಶ್ನೆಗೆ, ಅದಕ್ಕೆ ಹೈಕಮಾಂಡ್ ಸೂಚನೆ ನೀಡಲಿದೆ. ಹೈಕಮಾಂಡ್ ಸೂಚನೆಯನ್ನು ನಾನು ಆದಿಯಾಗಿ ಎಲ್ಲರೂ ಪಾಲನೆ ಮಾಡಬೇಕು ಎಂದರು.
Amid intense political activity and speculation over a possible change in leadership in Karnataka, Chief Minister Siddaramaiah on Friday made a strong and surprising statement. Addressing questions on leadership change and cabinet expansion, he clarified that such decisions ultimately lie with the party’s high command, and leaders abide by their directions.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am