ವಿಂಜೋ ಗೇಮಿಂಗ್ ಸಂಸ್ಥೆ ಮೇಲೆ ಇಡಿ ದಾಳಿ ; 527 ಕೋಟಿ ರೂ. ಹಣ ಜಪ್ತಿ, ಗೇಮಿಂಗ್ ಹೆಸರಲ್ಲಿ ಆಟಗಾರರಿಗೆ ಪಂಗನಾಮ, ಕಂಪೆನಿಯ ಕಳ್ಳಾಟ ಬಯಲಿಗೆಲದ ಅಧಿಕಾರಿಗಳು ! 

25-11-25 06:58 pm       Bangalore Correspondent   ಕರ್ನಾಟಕ

ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್‌ ಖಾತೆ, ಬಾಂಡ್‌ಗಳು ಮತ್ತು ಮ್ಯೂಚುವಲ್‌ ಫಂಡ್‌ಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು, ನ 25 : ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್‌ ಖಾತೆ, ಬಾಂಡ್‌ಗಳು ಮತ್ತು ಮ್ಯೂಚುವಲ್‌ ಫಂಡ್‌ಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು, ಗುರ್ಗಾವ್‌ನಲ್ಲಿನ ಗೇಮಿಂಗ್‌ ಆ್ಯಪ್‌ 'ವಿಂಜೋ'ಗೆ ಸಂಬಂಧಿಸಿದ ಕಚೇರಿಗಳ ಮೇಲೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸುಮಾರು 505 ಕೋಟಿ ರೂ. ಮೌಲ್ಯದ ಬ್ಯಾಂಕ್ ಠೇವಣಿ, ಬಾಂಡ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಇಡಿ ವಶಪಡಿಸಿಕೊಂಡಿದೆ.

Image for representational purposes only. Image for representational purposes only. Image for representational purposes only. ED raids Gameskraft, WinZO in Delhi, Bengaluru, Gurugram over complaints of  'manipulated algorithms'

ED raids three online gaming companies; freezes accounts with over ₹523  crore - The Hindu

ವಿಂಜೋ ಗೇಮ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಗ್ರಾಹಕರಿಗೆ ಮೋಸ ಮಾಡುತ್ತಿರುವುದು ತನಿಖೆಯಿಂದ ಗೊತ್ತಾಗಿದೆ. ಗೇಮಿಂಗ್‌ ಹೆಸರಲ್ಲಿ ಕಂಪನಿಯು ರಹಸ್ಯವಾಗಿ ಅಲ್ಗರಿದಮ್‌ಗಳು ಮತ್ತು ಸಾಫ್ಟ್‌ವೇರ್‌ಗಳನ್ನು ಬಳಸಿ ಗ್ರಾಹಕರನ್ನು ಸೋಲಿಸುತ್ತಿತ್ತು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.

ವಿಂಜೋ ಯುಎಸ್ ಇಂಕ್ ಎಂಬ ನಕಲಿ ಕಂಪನಿಯನ್ನು ಸೃಷ್ಟಿಸಿ, ಭಾರತದಿಂದ ಸುಮಾರು 55 ಮಿಲಿಯನ್ ಡಾಲರ್ (ಅಂದಾಜು 489.90 ಕೋಟಿ ರೂ.) ಹಣವನ್ನು ಅಮೆರಿಕ ಮತ್ತು ಸಿಂಗಾಪುರಕ್ಕೆ ಅಕ್ರಮವಾಗಿ ವರ್ಗಾಯಿಸಲಾಗಿದೆ. ಅಲ್ಲದೇ, ಕೇಂದ್ರ ಸರ್ಕಾರವು ರಿಯಲ್ ಮನಿ ಗೇಮ್ಸ್ ಅನ್ನು ನಿಷೇಧಿಸಿದ ನಂತರವೂ ಕಂಪನಿಯು ಗ್ರಾಹಕರಿಗೆ ಹಿಂತಿರುಗಿಸಬೇಕಾದ 43 ಕೋಟಿ ರೂ. ಹಣವನ್ನು ತಡೆ ಹಿಡಿದಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.


ಈ ನಡುವೆ ಮತ್ತೆರೆಡು ಕಂಪನಿಗಳು ಸಹ ಇದೇ ರೀತಿ ವಂಚನೆ ಮಾಡುತ್ತಿದ್ದ ಆರೋಪದ ಮೇರೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಆನ್‌ಲೈನ್ ಗೇಮಿಂಗ್ ಹೆಸರಿನಲ್ಲಿ ಭಾರೀ ವಂಚನೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಇಡಿ ಅಧಿಕಾರಿಗಳು 'ಪಾಕೆಟ್-52' (ನಿರ್ದೇಸ ನೆಟ್‌ವರ್ಕ್ಸ್ ಪ್ರೈ. ಲಿ) ಮತ್ತು 'ಗೇಮ್ಸ್‌ಕ್ರಾಫ್ಟ್ ಟೆಕ್ನಾಲಜೀಸ್' ಕಚೇರಿಗಳ ಮೇಲೆ ದಾಳಿ ನಡೆಸಿದೆ. ಪಾಕೆಟ್-52 ಗೇಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಗೇಮ್‌ಗಳ ಫಲಿತಾಂಶವನ್ನು ಮೊದಲೇ ನಿರ್ಧರಿಸಲಾಗುತ್ತಿತ್ತು. ಮತ್ತು ತಾಂತ್ರಿಕ ದೋಷಗಳನ್ನು ಸೃಷ್ಟಿಸಿ ಬಳಕೆದಾರರನ್ನು ಸೋಲಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ವ್ಯವಸ್ಥಿತ ವಂಚನೆಯಿಂದಾಗಿ ಒಬ್ಬ ಬಳಕೆದಾರರೇ ಬರೋಬ್ಬರಿ 3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು 'ಪ್ರಮೋಷನ್ ಅಂಡ್​ ರೆಗ್ಯುಲೇಷನ್ ಆಫ್ ಆನ್‌ಲೈನ್ ಗೇಮಿಂಗ್ ಆ್ಯಕ್ಟ್ - 2025' ಅಡಿಯಲ್ಲಿ ರಿಯಲ್ ಮನಿ ಗೇಮ್‌ಗಳನ್ನು ನಿಷೇಧಿಸಿದ್ದರೂ, ಈ ಕಂಪನಿಗಳು ಗ್ರಾಹಕರ 30 ಕೋಟಿ ರೂ. ಅಧಿಕ ಹಣವನ್ನು ವಾಪಸ್ ನೀಡದೆ ತಮ್ಮ ಎಸ್ಕ್ರೊ ಖಾತೆಗಳಲ್ಲಿ ಇರಿಸಿಕೊಂಡಿವೆ. ಕಂಪನಿಯ ನಿರ್ದೇಶಕರ ಮೊಬೈಲ್, ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸುಮಾರು 18.57 ಕೋಟಿ ರೂ. ಇರುವ 8 ಬ್ಯಾಂಕ್ ಖಾತೆಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದಿದ್ದಾರೆ.

The Enforcement Directorate (ED) has seized over ₹527 crore in bank deposits, bonds, and mutual funds after conducting raids on gaming app companies under the Prevention of Money Laundering Act. Major action was taken against WinZO Games Pvt. Ltd., whose Bengaluru and Gurugram offices were searched.