ಬ್ರೇಕಿಂಗ್ ನ್ಯೂಸ್
27-11-25 12:49 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ್.ರಾಜಣ್ಣ ನೇರ ಟಾಂಗ್ ಇಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬದಲಾವಣೆ ಮಾಡುವುದಿದ್ದರೆ ಸಿಎಲ್‌ಪಿ ಸಭೆಯಲ್ಲೇ ನಿರ್ಧಾರವಾಗಲಿ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಯಾರೂ ಹೇಳಿಲ್ಲ. 30–30 ತಿಂಗಳು ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಸುಮ್ಮನೆ ಕೆಲವರು ಹೇಳುತ್ತಿದ್ದಾರೆ ಎಂದರು.
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು. ಸಿಎಲ್ ಪಿಯಲ್ಲು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಯಾರಾದರೂ ಕೇಳಿದ್ದಾರಾ ಎಂದು ಪ್ರಶ್ನಿಸಿದರು.
2013ರಲ್ಲಿ ಪರಮೇಶ್ವರ್ ಪಕ್ಷವನ್ನು ಅಧಿಕಾರಕ್ಕೆ ತಂದರೂ, ದುರದೃಷ್ಟವಶಾತ್ ಅವರು ಸೋತರು. ಇವರು (ಡಿಕೆ ಶಿವಕುಮಾರ್) ಈಗ ಕೂಲಿ ಕೇಳುವವರು. ಆದರೆ ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ಲಾ? ಅವರದ್ದು ಹಳೆಯ ಕೂಲಿ, ಮೊದಲು ಅದು ಚುಕ್ತಾ ಆಗಲಿ. ಆಮೇಲೆ ಇವರ ವಿಚಾರ ನೋಡೋಣ ಎಂದರು.
ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಹೇಳಿದ್ದಾರೆ. ಅದಕ್ಕಾಗಿ ನಾನು ಮಾತನಾಡುವುದಿಲ್ಲ. ನನ್ನ ವೈಯಕ್ತಿಕ ಆಶಯ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕೆಂಬುದು. ಮುಂದೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆ ಹೋಗೋಣ. ಆಗ ಬಹುಮತ ಪಡೆದು ಅವರೇ ಐದು ವರ್ಷ ಸಿಎಂ ಆಗಲಿ ಎಂದರು.
In the midst of growing leadership tensions in Karnataka Congress, MLA K.N. Rajanna has stirred fresh debate by suggesting that if leadership must change, the Assembly should be dissolved and elections should be held under DK Shivakumar’s leadership. He remarked that while DK Shivakumar is demanding his “turn,” G. Parameshwara also deserves his pending “dues” first.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am