ಹೊಸಕೋಟೆ ಬಳಿ KSRTC ಬಸ್​ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

27-11-25 12:56 pm       Bangalore Correspondent   ಕರ್ನಾಟಕ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್​ಆರ್​ಟಿಸಿ ಹಾಗೂ ಕ್ಯಾಂಟರ್​ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್​ ಸಂಪೂರ್ಣ ಜಖಂಗೊಂಡಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ ಎಂದು ವರದಿ ಆಗಿದೆ. 

ಬೆಂಗಳೂರು, ನ.27 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್​ಆರ್​ಟಿಸಿ ಹಾಗೂ ಕ್ಯಾಂಟರ್​ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್​ ಸಂಪೂರ್ಣ ಜಖಂಗೊಂಡಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ ಎಂದು ವರದಿ ಆಗಿದೆ. 

15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ; 

ಹೊಸಕೋಟೆ ನಗರದ ಎಂಇಜೆ ಬಳಿ ಕೆಎಸ್ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸೂಕ್ತ ಚಿಕಿತ್ಸೆ ನೀಡಲಾಗ್ತಿದೆ.

ಕೆಎಸ್ಆರ್​ಟಿಬಸ್ ಬಸ್ ಸಂಪೂರ್ಣ ಜಖಂ: 

ಕೆಎಸ್ಆರ್​ಟಿಬಸ್ ಹಾಗೂ ಕ್ಯಾಂಟರ್ ವಾಹನಗಳು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಈ ಆ್ಯಕ್ಸಿಡೆಂಟ್ ಕಂಡು ಸ್ಥಳೀಯರು ಆಘಾತಗೊಂಡಿದ್ದಾರೆ. ಅತಿ ವೇಗದ ಚಾಲನೆ ಹಾಗೂ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ.

ಪೊಲೀಸರ ಭೇಟಿ, ಪರಿಶೀಲನೆ

ಗಾಯಾಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಾಗ್ತಿದೆ.

A major accident occurred near Hoskote on the Bengaluru–Kolar National Highway after a KSRTC bus and a canter vehicle collided head-on. The impact severely damaged the bus and left over 15 passengers critically injured.