ಬ್ರೇಕಿಂಗ್ ನ್ಯೂಸ್
27-11-25 10:23 pm HK News Desk ಕರ್ನಾಟಕ
ಕೊಪ್ಪಳ, ನ.27 : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಓದುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಬಾಲಕಿಯ ಹೆರಿಗೆ ವಸತಿ ನಿಲಯದ ಆವರಣದಲ್ಲಿಯೇ ನಡೆದಿದೆ ಎಂಬ ಮಾಹಿತಿ ಇದ್ದು, ವಸತಿ ನಿಲಯದ ಸಿಬ್ಬಂದಿಗಳ ನಿರ್ಲಕ್ಷ್ಯ ಮತ್ತು ಕಾರ್ಯವೈಖರಿ ಮೇಲೆ ತೀವ್ರ ಅನುಮಾನ ಹುಟ್ಟುಹಾಕಿದೆ.
ತಾಯಿ ಮತ್ತು ನವಜಾತ ಗಂಡು ಮಗುವನ್ನು ಕೊಪ್ಪಳದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಬಾಲಕಿ ಕುಕನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬ ಮಾಹಿತಿ ಇದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, 16 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದು ಮತ್ತು ಹೆರಿಗೆಯಾಗಿದ್ದು ವಸತಿ ನಿಲಯದ ಸಿಬ್ಬಂದಿಗಳಿಗೆ ಏಕೆ ತಿಳಿದಿಲ್ಲ ಎಂಬ ಪ್ರಶ್ನೆ ಎದ್ದಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮಗುವಿಗೆ ಜನ್ಮ ನೀಡಿದ ಪ್ರಕರಣವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಗಂಭೀರ ಪರಿಗಣಿಸಿದ್ದು ವಸತಿ ನಿಲಯದ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿರುವ ಹಿನ್ನೆಲೆಯಲ್ಲಿ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜಿಲ್ಲಾಡಳಿತಕ್ಕೆ ಪತ್ರ ಬರೆದು ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಪ್ರಕರಣ ಕುರಿತು ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, ವಾರ್ಡನ್ ಅನ್ನು ಅಮಾನತ್ತುಗೊಳಿಸಲಾಗಿದೆ ಮತ್ತು ಘಟನೆಗೆ ಕಾರಣನಾದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
A disturbing incident has been reported from a village in Kukanur taluk, Koppal district, where a 10th-grade girl residing in a government pre-matric girls’ hostel delivered a baby boy within the hostel premises. The incident has triggered massive outrage, raising serious concerns over the gross negligence of hostel staff, who failed to notice the minor’s pregnancy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am