ಬ್ರೇಕಿಂಗ್ ನ್ಯೂಸ್
28-11-25 09:31 pm HK News Desk ಕರ್ನಾಟಕ
ಮೈಸೂರು, ನ.28 : ರಾಜ್ಯದಲ್ಲಿ ಕಳೆದ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣರು. ತಮ್ಮ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ.
ಪರಿಣಾಮ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾಂಗ್ರೆಸ್ ನಿಂದ 14 ಮಂದಿ ಶಾಸಕರನ್ನು ಕಳುಹಿಸಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದ್ದೇ ಸಿದ್ದರಾಮಯ್ಯ. ಹೀಗೆಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹರಿಹಾಯ್ದಿದ್ದಾರೆ.
ಸಿದ್ದರಾಮಯ್ಯರನ್ನು ನಾವು ಕಾಂಗ್ರೆಸ್ ಕರೆತಂದಾಗ ಈ ದುರಹಂಕಾರಿಯನ್ನು ಏಕೆ ಕರೆ ತರುತ್ತಿದ್ದೀರಿ ಎಂದು ಹಲವಾರು ಮಂದಿ ನಾಯಕರು ನಮ್ಮನ್ನು ಕೇಳಿದ್ದರು. ಆದರೆ ಕಾಂಗ್ರೆಸ್ ಗೆ ಕರೆತಂದವರನ್ನೇ ಸಿದ್ದರಾಮಯ್ಯ ಮುಗಿಸಿದರು. ಸಿದ್ದರಾಮಯ್ಯ ಕಾಂಗ್ರೆಸ್ ಸೇರಲು ಡಿ.ಕೆ ಶಿವಕುಮಾರ್ ಪಾತ್ರ ಪ್ರಮುಖವಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರನನ್ನು ಗೆಲ್ಲಿಸುವ ಸಲುವಾಗಿ ಶಿಕಾರಿಪುರದಲ್ಲಿ ಕುರುಬ ಸಮುದಾಯದ ನಾಯಕನಿಗೆ ಟಿಕೆಟ್ ತಪ್ಪಿಸಿದ್ದೇ ಸಿದ್ದರಾಮಯ್ಯ. ಲೋಕಸಭಾ ಚುನಾವಣೆಯಲ್ಲಿ ನಾನು ಸೋಲಲು ಕೂಡ ಸಿದ್ದರಾಮಯ್ಯ ಕಾರಣ. ಪ್ರತಾಪ್ ಸಿಂಹಗೆ ನೆರವು ನೀಡಿ ನನ್ನ ಸೋಲಿಗೆ ಸಿದ್ದರಾಮಯ್ಯ ಕಾರಣ ಆದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ. ಪರಮೇಶ್ವರ್ ಸೋಲಿಗೆ ಯಾರು ಕಾರಣ?ಪರಮೇಶ್ವರ್ ಸಿಎಂ ಆಗುವುದನ್ನು ತಪ್ಪಿಸಲು ಅವರ ಸೋಲಿಗೆ ಸಿದ್ದರಾಮಯ್ಯ ಕಾರಣರಾದರು. ಪರಮೇಶ್ವರ್ ಸೋಲಿಗೂ ಸಿದ್ದರಾಮಯ್ಯರೇ ಕಾರಣ.
ರಾಜಕೀಯವಾಗಿ ಬೆಳೆಸಿದ ಹೆಚ್.ಡಿ ದೇವೇಗೌಡರನ್ನು ಧಿಕ್ಕರಿಸಿದ ಸಿದ್ದರಾಮಯ್ಯಗೆ ಕೃತಜ್ಞತೆ ಇಲ್ಲ. ಸಿದ್ದರಾಮಯ್ಯ ಕೃತಜ್ಞತಾ ಹೀನವಾಗಿದ್ದಾರೆ. ದೇವರಾಜ ಅರಸು ಅವರಿಗೆ ಸಿದ್ದರಾಮಯ್ಯ ಸರಿಸಮವಾಗಲು ಎಂದಿಗೂ ಸಾಧ್ಯವಿಲ್ಲ. ದೇವರಾಜ ಅರಸು ಅವರು ನೀಡಿದ ಕೊಡುಗೆಗಳನ್ನು ನೀಡಲು ಸಿದ್ದರಾಮಯ್ಯಗೆ ಸಾಧ್ಯವಿಲ್ಲ. ಡಿ.ಕೆ ಶಿವಕುಮಾರ್ ಹುಟ್ಟಾ ಕಾಂಗ್ರೆಸ್ಸಿಗ, ಎರಡೂವರೆ ವರ್ಷದ ಒಪ್ಪಂದ ಪ್ರಕಾರ ಅವರಿಗೆ ಅಧಿಕಾರ ಹಸ್ತಾಂತರ ಮಾಡಲೇಬೇಕು ಎಂದು ವಿಶ್ವನಾಥ್ ಹೇಳಿದರು.
ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಸುತ್ತೂರು ಶ್ರೀಗಳ ಕಾಲು ಹಿಡಿದು ಕಾ.ಪು ಸಿದ್ದಲಿಂಗಸ್ವಾಮಿಯನ್ನು ತಣ್ಣಗಾಗಿಸಿದರು. ಚಾಮುಂಡೇಶ್ವರಿ ಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಉಡುಪಿ ಮಠದ ಪೀಠಾಧಿಪತಿಗಳ ಕಾಲು ಹಿಡಿದರು. ಸಿದ್ದರಾಮಯ್ಯ ಒಳಗೊಂದು ಹೊರಗೊಂದು ಎಂಬಂತೆ ಡಬಲ್ ಸ್ಟ್ಯಾಂಡ್ ಹೊಂದಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
In a sharp attack, MLC H. Vishwanath accused Chief Minister Siddaramaiah of being “ungrateful” and responsible for the BJP forming the government in Karnataka during the previous term. Vishwanath alleged that Siddaramaiah himself facilitated the defection of 14 Congress MLAs to the BJP, enabling B.S. Yediyurappa to take oath as Chief Minister.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am