ಬ್ರೇಕಿಂಗ್ ನ್ಯೂಸ್
29-11-25 03:34 pm HK News Desk ಕರ್ನಾಟಕ
ಬೆಂಗಳೂರು, ನ.29: ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದು ಬಳಿಕ ಮಾಧ್ಯಮ ಗೋಷ್ಠಿ ನಡೆಸಿದ್ದಾರೆ. ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ. ಮುಂದೆಯೂ ಇದೇ ರೀತಿ ಇರಲಿದ್ದೇವೆ. ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ನಾವು ಅದಕ್ಕೆ ಬದ್ಧರಿದ್ದೇವೆ ಎಂದು ಹೇಳುವ ಮೂಲಕ ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ನೂಕಿದ್ದಾರೆ.
ನಮ್ಮ ನಡುವೆ ಭಿನ್ನಾಭಿಪ್ರಾಯ ಇಲ್ಲ, ಎಲ್ಲ ಮಾಧ್ಯಮಗಳದ್ದೇ ಸೃಷ್ಟಿ ಎಂದು ಹೇಳಿದ ಸಿದ್ದರಾಮಯ್ಯ ಅವರಲ್ಲಿ, ಕೆಲವು ಶಾಸಕರು ದೆಹಲಿಗೆ ಹೋಗಿದ್ದೇಕೆಂಬ ಪ್ರಶ್ನೆ ಇಟ್ಟರು. ಸಂಪುಟ ಪುನಾರಚನೆ ಮಾಡುತ್ತೇನೆ ಎಂದು ಹೇಳಿದ್ದೆ. ಹಾಗಾಗಿ ಕೆಲವು ಶಾಸಕರು ತಮ್ಮನ್ನು ಮಂತ್ರಿ ಮಾಡಿ ಎಂದು ಲಾಬಿ ಮಾಡಲು ದೆಹಲಿಗೆ ಹೋಗಿದ್ದರು. ನಮ್ಮ ನಾಯಕತ್ವದ ವಿರುದ್ಧ ಶಾಸಕರು ದೆಹಲಿಗೆ ಹೋಗಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಯಾವುದೇ ಶಾಸಕರು ಅಥವಾ ಸಚಿವರು ಸರ್ಕಾರದ ವಿರುದ್ಧವಾಗಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವಿಬ್ಬರೂ ಬದ್ಧರಿದ್ದೇವೆ. ಹೈಕಮಾಂಡ್ ಏನು ಹೇಳುತ್ತೋ ಅದನ್ನು ಒಪ್ಪಿಕೊಳ್ಳುತ್ತೇವೆ. ಹೈಕಮಾಂಡ್ ಹೇಳಿದ್ದರಿಂದ ಜೊತೆಗೆ ಕುಳಿತು ಮಾತುಕತೆ ಮಾಡಿದ್ದೇವೆ. ಹೈಕಮಾಂಡ್ಗೆ ಮಾತುಕತೆ ಕುರಿತು ಮಾಹಿತಿ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಆದರೆ, ಗೊಂದಲ ತಿಳಿಗೊಳಿಸುವುದಕ್ಕೆಂದೇ ಮಾತುಕತೆ ನಡೆಸಿದ್ದರೂ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡದೆ ಅನುಮಾನಗಳನ್ನು ಬಿಟ್ಟು ಹೋಗಿದ್ದಾರೆ. ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಕುರಿತ ರಹಸ್ಯ ಒಪ್ಪಂದ ಬಗ್ಗೆ ಕೇಳಿದ ಪ್ರಶ್ನೆಗೂ ಮಾಹಿತಿ ನೀಡಲಿಲ್ಲ. ಈ ಬಗ್ಗೆ ಪ್ರಶ್ನೆ ಕೇಳಲು ಮಾಧ್ಯಮ ಪ್ರತಿನಿಧಿಗಳು ಮುಂದಾದಾಗ, ನಾವು ಹೇಳಿದ್ದನ್ನು ಮೊದಲು ಕೇಳಿ. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಆಗುವುದಿಲ್ಲ. ಏನಿದ್ದರೂ ಹೈಕಮಾಂಡ್ ಹೇಳಿದಂತೆ ಮುಂದುವರಿಯುತ್ತೇವೆ ಎಂದು ಚುಟುಕಾಗಿಯೇ ಹೇಳುತ್ತ ಗೊಂದಲ ಉಳಿಸಿದರು.
ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಇಬ್ಬರ ನಡುವಣ ಗೊಂದಲವನ್ನು ಸೆಟಲ್ ಮಾಡಿಕೊಂಡಿದ್ದೇವೆ. ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು 2028ರ ಚುನಾವಣೆಗೆ ಸಿದ್ಧತೆ ಮಾಡುವ ಬಗ್ಗೆ ಚರ್ಚಿಸಿದ್ದೇವೆ. ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳಿಗೆ ಸಮರ್ಪಕವಾಗಿ ಕೌಂಟರ್ ಕೊಟ್ಟು ಮಣಿಸುವ ಬಗ್ಗೆ ಒಮ್ಮತಕ್ಕೆ ಬಂದಿದ್ದೇವೆ ಎಂದು ಉಭಯ ನಾಯಕರು ಸ್ಪಷ್ಟಪಡಿಸಿದರು.
In an effort to quell ongoing speculation over internal differences and power-sharing issues, Chief Minister Siddaramaiah and Deputy Chief Minister D.K. Shivakumar held a breakfast meeting on Saturday, followed by a joint media briefing. Both leaders reiterated that there is “no confusion or conflict” between them and affirmed that they remain “fully committed to the High Command’s decisions.” With this, they once again shifted the responsibility back to the party leadership in Delhi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am