ಬ್ರೇಕಿಂಗ್ ನ್ಯೂಸ್
10-12-25 09:40 pm HK News Desk ಕರ್ನಾಟಕ
ಬೆಳಗಾವಿ, ಡಿ.10: ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನ ಹೊಣೆಯಾಗಿಸಿ ತಕ್ಷಣ ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಪ್ರಶ್ನೆಗೆ ಉತ್ತರಿಸಿದ ರೆಡ್ಡಿ, ಆರ್ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆದಾಗ್ಯೂ ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲಾಗುವುದು ಎಂದರು.
ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಚೇರಿಯ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಭೇಟಿ ಮಾಡಿ, ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್ಟಿಒ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಕೇಂದ್ರದಿಂದ ರಾಜ್ಯಕ್ಕೆ ಎಲೆಕ್ಟ್ರಿಕಲ್ ಬಸ್‍ಗಳ ಹಂಚಿಕೆಗೆ ಕುರಿತ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್‍ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್‍ಗಳ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಕರಾರು ಒಪ್ಪಂದದಲ್ಲಿ ದಂಡ ವಿಧಿಸಲಾಗಿದೆ ಎಂದರು.
2023 ಜನವರಿಯಿಂದ ಇಲ್ಲಿಯವರೆಗೆ ಕಾರ್ಯಾಚರಣೆ ಸಮಯದಲ್ಲಿ ಆಕಸ್ಮಿಕವಾಗಿ ವಿವಿಧ ಕಾರಣಗಳಿಂದ ಒಟ್ಟು 477 ಬಾರಿ ಬಸ್ಸುಗಳಿಗೆ ಅವಘಡ ಸಂಭವಿಸಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಪರ್ಯಾಯ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ. ಬಿಎಂಟಿಸಿಗೆ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 1,221 ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯಾಚರಣೆಯಲ್ಲಿರುತ್ತವೆ. 2023-24 ರಿಂದ 2025 ಸೆಪ್ಟಂಬರ್ ವರೆಗೆ ಬ್ಯಾಟರಿ ದೋಷಗಳಿಂದ 14,082 ಬಾರಿ ಹಾಗೂ ಇನ್ನಿತರ ದೋಷದಿಂದ 2049 ಬಾರಿ ಅಪಘಾತಕ್ಕೀಡಾಗಿರುತ್ತವೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕಂಪನಿಯವರು ಈ ಬಸ್ಸುಗಳನ್ನು ದುರಸ್ತಿಗೊಳಿಸಿ ಕಾರ್ಯಾಚರಣೆಗೆ ನೀಡಿದ್ದಾರೆ ಎಂದು ಹೇಳಿದರು.
Transport Minister Ramalinga Reddy has issued a strict warning that officials will be held directly responsible and immediately suspended if middlemen are found operating in any RTO office across the state.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm