ಬ್ರೇಕಿಂಗ್ ನ್ಯೂಸ್
11-12-25 10:47 pm HK News Desk ಕರ್ನಾಟಕ
ಕಲಬುರಗಿ, ಡಿ 11 : ಕಲಬುರಗಿ-ಅಫಜಲಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ಮಾದರಿ ರಸ್ತೆಯಲ್ಲಿ ಸಾರಿಗೆ ಬಸ್ ಹಾಗೂ ಜೀಪ್ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜೀಪ್ನಲ್ಲಿದ್ದ ಅಫಜಲಪುರ ತಾಲೂಕಿನ ತೆಲ್ಲೋಣಿ ಗ್ರಾಮದ ದಂಪತಿ ಚಂದ್ರಕಾಂತ ಚಿತ್ತಾಪುರ, ಸುಲೋಚನಾ ಚಿತ್ತಾಪುರ ಹಾಗೂ ಮಿಟ್ಟುಸಾಬ ರಸೂಲ್ ಪಟೇಲ್ ಮೃತರು ಎಂದು ಗುರುತಿಸಲಾಗಿದೆ.


ಕಲಬುರಗಿಯಿಂದ ಅಫಜಲಪುರಕ್ಕೆ ಹೊರಟಿದ್ದ ಸಾರಿಗೆ ಬಸ್ ಹಾಗೂ ಅಫಜಲಪುರದಿಂದ ಕಲಬುರಗಿಗೆ ಬರುತ್ತಿದ್ದ ಜೀಪ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿ ಸಂಚಾರಿ ಠಾಣೆಯಲ್ಲಿ ಈ ಕುರಿತಾದ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಪೊಲೀಸ್ ಆಯುಕ್ತರ ಭೇಟಿ: ರಸ್ತೆ ಅಪಘಾತದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್‌ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇದಕ್ಕೂ ಮುನ್ನ ಸಂಚಾರಿ ಠಾಣೆ ಎಸಿಪಿ ಸುಧಾ ಆದಿ, ಇನ್ಸ್ಪೆಕ್ಟರ್ ಸೇರಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಾಳುಗಳ ನೆರವಿಗೆ ದಾವಿಸಿದರು.
ಇನ್ನು ಇಂದು ಬೆಳಿಗ್ಗೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ಅಪಘಾತಕ್ಕೆ ಮೂರು ಸ್ಥಳದಲ್ಲೇ ಸವನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆ ವೇಗವಾಗಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೃತಪಟ್ಟವರನ್ನು 33 ವರ್ಷದ ಮೋಹನ್ ಕುಮಾರ್ 28 ವರ್ಷದ ಸುಮನ್ ಮತ್ತು 23 ವರ್ಷದ ಸಾಗರ್ ಎಂದು ಗುರುತಿಸಲಾಗಿದೆ.
ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಗೆ ಬರುವ ವೇಳೆ ಅತಿವೇಗದಿಂದ ಕಿಯಾ ಕಾರು ಚಾಲನೆ ಮಾಡಿದ್ದೇ, ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಳೆದ ನವೆಂಬರ್‌ನಲ್ಲಿ ಮಂಗಳೂರಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿ, ಒಟ್ಟು 6 ಜನರು ದುರ್ಮರಣಕ್ಕೀಡಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
In yet another tragic incident highlighting the increasing number of road accidents in Karnataka, a KSRTC bus and a jeep collided head-on on the Kalaburagi–Afzalpur national highway model road, resulting in the death of three people on the spot. Several others sustained serious injuries and have been hospitalized.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am