ಬ್ರೇಕಿಂಗ್ ನ್ಯೂಸ್
12-12-25 03:18 pm HK News Desk ಕರ್ನಾಟಕ
ಬೆಳಗಾವಿ, ಡಿ.12 : ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.
ಬೆಳಗಾವಿಯಲ್ಲಿ ನಿನ್ನೆ ನಡೆದ ಡಿ.ಕೆ.ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ ಎಂದರು. ಅದೊಂದು ಸೌಹಾರ್ದ ಭೋಜನ ಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್‌ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.
ಅಧಿವೇಶನ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸ ಇದೆ. ಎಲ್ಲದಕ್ಕೂ ಹಣೆ ಬರಹವೇ ಮುಖ್ಯ. ಅವಕಾಶ ಸಿಗದಿದ್ದರೆ ಹಣೆ ಬರಹಕ್ಕೆ ಹೊಣೆ ಯಾರು? ಭಗವಂತ ಏನು ಬರೆದಿದ್ದಾನೋ ಅದು ಆಗುತ್ತದೆ ಎಂದರು.
ಡಿಕೆ ಶಿವಕುಮಾರ್ ಅವರ ಹೋರಾಟ, ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ. ನಾವು ನಮ್ಮ ಅಭಿಪ್ರಾಯಗಳನ್ನು ಈಗಾಗಲೇ ಹೈಕಮಾಂಡ್ ನಾಯಕರ ಮುಂದೆ ಹೇಳಿದ್ದೇವೆ. ವರಿಷ್ಠರು ಕರೆದರೆ ನಾವು ಮತ್ತೊಮ್ಮೆ ದೆಹಲಿಗೆ ಹೋಗುತ್ತೇವೆ ಎಂದರು.
Congress MLA Iqbal Hussain has claimed that Deputy Chief Minister D.K. Shivakumar will take over as the Chief Minister of Karnataka immediately after the Belagavi winter session concludes. Speaking to reporters in Belagavi on Friday morning, the Ramanagara MLA said, “As soon as the session ends, D.K. Shivakumar will be given the Chief Minister’s post.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am