ಬ್ರೇಕಿಂಗ್ ನ್ಯೂಸ್
12-12-25 08:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 12 : ಸಾಕು ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (32) ಸಾವನ್ನಪ್ಪಿರುವ ಯುವಕ.
ಲಿಖಿತಾ ಎಂಬವರು 2 ಲಕ್ಷ ರೂ. ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್‌ನಲ್ಲಿ ಸಾಕಿದ್ದರು. ಇಂದು ಅಪಾರ್ಟ್‌ಮೆಂಟ್ ಆವರಣದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಲಿಖಿತಾರ ಸಂಬಂಧಿ ಅರುಣ್ ಕುಮಾರ್, ಕಬ್ಬಿಣದ ಪೈಪ್‌ಗೆ ಕಟ್ಟಿಗೆ ಸೇರಿಸಿ ಅಪಾರ್ಟ್‌ಮೆಂಟ್ ಕಾಂಪೌಂಡ್ ಮೇಲೆ ನಿಂತು ಗಿಳಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ 66 ಸಾವಿರ ಕೆ.ವಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅರುಣ್ ಕುಮಾರ್, ಕಾಂಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್‌ಮೆಂಟ್ ಆವರಣದೊಳಗೆ ಹೈಟೆನ್ಷನ್ ವೈರ್ಗಳು ಇರುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್, ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ತಿದ್ದ, ಖಾಸಗಿಯಾಗಿ ಕೆಲಸ ಮಾಡುತ್ತಿದ್ದ ಅರುಣ್, ತಾಯಿಗೆ ಆಸರೆಯಾಗಿದ್ದರು.
In a tragic incident, a 32-year-old man died of electrocution while attempting to rescue a pet parrot worth ₹2 lakh in Veerabhadra Nagar under Girinagar Police Station limits. The deceased has been identified as Arun Kumar (32).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am