ಬ್ರೇಕಿಂಗ್ ನ್ಯೂಸ್
13-12-25 04:00 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.13: ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಮತಕಳ್ಳತನ ಪ್ರಕರಣದಲ್ಲಿ ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಪುತ್ರನ ಪಾತ್ರದ ಬಗ್ಗೆ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.
ಅಳಂದ ಮತಗಳವು ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಎಸ್ಐಟಿ (ಡಿ.12) ಶುಕ್ರವಾರ 22 ಸಾವಿರ ಪುಟಗಳ ದೋಷರೋಪ ಪಟ್ಟಿ ಸಲ್ಲಿಸಿದ್ದು, ಏಳು ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ನಡೆದಿದ್ದ ಮತಗಳ್ಳತನ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು 22 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪವನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಚುನಾವಣಾಧಿಕಾರಿಗಳಿಗೂ ದೂರು ನೀಡಲಾಗಿತ್ತು. ಅಲ್ಲದೆ, ಸಿದ್ದರಾಮಯ್ಯ ಸರ್ಕಾರವು ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿತ್ತು. ತನಿಖೆ ಸಂದರ್ಭದಲ್ಲಿ ಬಂಧನ ಭೀತಿ ಎದುರಿಸಿದ್ದ ಸುಭಾಷ್ ಗುತ್ತೇದಾರ್ ಮತ್ತು ಪುತ್ರ ನಿರೀಕ್ಷಣಾ ಜಮೀನು ಪಡೆದಿದ್ದರು.
ಅಳಂದ ಕ್ಷೇತ್ರದಲ್ಲಿ 5,994 ಮತದಾರರ ಹೆಸರು ಅಳಿಸಲಾಗಿದೆ ಎಂಬುದಾಗಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಮತ ಕಳವು ಯತ್ನಕ್ಕೆ ಸೈಬರ್ ಸೆಂಟರ್ ಒಂದನ್ನು ಬಳಸಿಕೊಂಡಿದ್ದು ಪತ್ತೆಯಾಗಿತ್ತು. ಅಲ್ಲದೆ ಮತದಾರ ಪಟ್ಟಿಯಿಂದ ಹೆಸರು ಅಳಿಸಲು ಗುತ್ತೇದಾರ್ ಹಣ ಪಾವತಿ ಮಾಡಿದ್ದರು ಎನ್ನಲಾಗಿತ್ತು.
ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದು ತನಿಖೆಯಲ್ಲಿ ಹಲವಾರು ಅಂಶಗಳು ಪತ್ತೆಯಾಗಿದ್ದವು. ತಾಂತ್ರಿಕ ಮಾಹಿತಿ ಆಧರಿಸಿ ತನಿಖೆ ನಡೆಸಿದ್ದ ಎಸ್ಐಟಿ, ಮತ ಅಳಿಸಿ ಹಾಕಲು ಸಲ್ಲಿಸಿದ್ದ ಅರ್ಜಿಗಳ ಮೂಲ ಕೆದಕಿದಾಗ ಹಣದ ವಹಿವಾಟು ಕಂಡುಬಂದಿತ್ತು. ಅಕ್ರಂ ಪಾಷ ಎಂಬಾತ ಕಾಲ್ ಸೆಂಟರ್ ನಡೆಸ್ತಿದ್ದು ಅದರ ಮೂಲಕ ಒಟಿಪಿ ಬಳಸಿಕೊಂಡು ಮತಪಟ್ಟಿಯಿಂದ ಹೆಸರು ಡಿಲೀಟ್ ಮಾಡಿದ್ದರು ಎನ್ನುವ ಮಾಹಿತಿ ಲಭಿಸಿತ್ತು.
The Special Investigation Team (SIT) probing the alleged voter theft case in the Aland Assembly constituency of Kalaburagi district has filed a charge sheet before the APJM court. The charge sheet reportedly details the role of former BJP MLA Subhash Guttedar and his son Harshanand in the case.
13-12-25 08:38 pm
HK News Desk
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm