ಬ್ರೇಕಿಂಗ್ ನ್ಯೂಸ್
16-12-25 03:08 pm Bangalore Correspondent ಕರ್ನಾಟಕ
Photo credits : AI PHOTO
ಬೆಂಗಳೂರು, ಡಿ.16 : ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಅಕ್ರಮ ಆಸ್ತಿ ಮಾಡಿಟ್ಟಿರುವ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಅಧಿಕಾರಿಯೊಬ್ಬರು ಲೋಕಾಯುಕ್ತ ದಾಳಿಯಿಂದ ಭಯಗೊಂಡು ಹಣವನ್ನು ಟಾಯ್ಲೆಟ್ ಕಮೋಡ್‌ಗೆ ಸುರಿದು ಫ್ಲಶ್ ಮಾಡಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ಅವರ ಧಾರವಾಡದ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ರಾಜಶೇಖರ್ಗೆ ಸೇರಿದ ಒಟ್ಟು ಮೂರು ಕಡೆ ದಾಳಿ ನಡೆಸಲಾಗಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್‌ಗೆ ಸುರಿದು ಫ್ಲಶ್ ಮಾಡಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಬಾಗಿಲು ತೆಗೆಯದೆ ಲೊಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಗಳಿಕೆ ಆರೋಪ ಹಿನ್ನೆಲೆ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪಾ ನಾಯ್ಕ ಅವರ ಮನೆ, ಕಚೇರಿ ಸೇರಿ ವಿವಿಧೆಡೆ ದಾಳಿಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಏಕ ಕಾಲಕ್ಕೆ ದಾಳಿ ನಡೆಸಲಾಗಿದ್ದು ಬಸವನಗುಡಿ ಮತ್ತು ಕೆಂಗೇರಿಯ ಮನೆ, ಶಿವಮೊಗ್ಗದ ಕಚೇರಿ, ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಪಿಆರ್ಇಡಿ ಸೂಪರಿಡೆಂಟ್ ಬೈರೇಶ್ಗೂ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಏಕಕಾಲದಲ್ಲಿ ಮಂಡ್ಯದ ನಿವಾಸ, ಮದ್ದೂರಿನ ಅತ್ತೆ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೈರೇಶ್ ಮೇಲೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
The Karnataka Lokayukta police conducted simultaneous raids across several districts, including Dharwad, Shivamogga, Mandya, Chikkamagaluru and Bengaluru, targeting officials accused of possessing assets disproportionate to their known sources of income. The surprise inspections led to dramatic scenes, with one officer in Dharwad allegedly panicking and flushing bundles of currency notes down a toilet.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am