ಬ್ರೇಕಿಂಗ್ ನ್ಯೂಸ್
17-12-25 12:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ರೈಲ್ವೇ ವಿದ್ಯುದೀಕರಣ ಸಲುವಾಗಿ ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು- ಮಂಗಳೂರು- ಕಾರವಾರ ರೈಲು ಸೇವೆಯನ್ನು ಪುನಾರಂಭಗೊಳಿಸಲು ನಿರ್ಧರಿಸಲಾಗಿದೆ. ಕರಾವಳಿಗೆ ಸಂಚಾರ ಮಾಡುವ ವಿವಿಧ ರೈಲುಗಳಲ್ಲಿ ಒಂದಾದ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು (16575/16576) ಸೇವೆ ಮತ್ತೆ ಶುರುವಾಗಿದ್ದು ರೈಲ್ವೇ ಇಲಾಖೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಬೆಂಗಳೂರಿನ ಯಶವಂತಪುರದಿಂದ ಈ ರೈಲು ಸಂಚಾರ ಆರಂಭಿಸಲಿದ್ದು ವಾರದಲ್ಲಿ ಮೂರು ದಿನ ಇರಲಿದೆ. ಇತ್ತೀಚೆಗೆ ಯಶವಂತಪುರ, ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳ ಕಾರಣದಿಂದಾಗಿ ಈ ರೈಲು ಸೇವೆಯನ್ನು ಜೂನ್ ನಿಂದ ನವೆಂಬರ್ ವರೆಗೆ ಆರು ತಿಂಗಳ ಕಾಲ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ಸೇವೆ ಪುನಾರಂಭಿಸಲಾಗಿದೆ.
ಪ್ರವಾಸೋದ್ಯಮ ಉತ್ತೇಜನ ಉದ್ದೇಶದಿಂದ ಪ್ರಕೃತಿ ಸೌಂದರ್ಯ ಸವಿಯಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಈ ಗೊಮ್ಮಟೇಶ್ವರ ರೈಲಿಗೂ ವಿಸ್ಟಾಡೋಮ್ ಕೋಚ್ ಅಳವಡಿಸಿದೆ. ಅಗಲ ಗಾಜಿನ ಕಿಟಿಕಿ, ಬೃಹತ್ ಗಾಜಿನ ಮೇಲ್ಚಾವಣಿ, ವ್ಯವಸ್ಥಿತ ಆಸನಗಳಿದ್ದವು. ಇದರಿಂದ ಮಳೆಗಾಲದಲ್ಲಿ ಹಾಸನ, ಸಂಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಮಂಗಳೂರು ಮಾರ್ಗದುದ್ದಕ್ಕೂ ಕಾಣುವ ಪ್ರಕೃತಿಯನ್ನು ಸವಿಯಬಹುದಾಗಿತ್ತು. ಮಳೆಗಾಲದಲ್ಲೇ ಈ ರೈಲಿನ ರದ್ದತಿಯಿಂದ ಪ್ರಯಾಣಿಕರಿಗೆ ಒಂದಷ್ಟು ನಿರಾಸೆಯಾಗಿತ್ತು.
ಇದೀಗ ಶ್ರವಣಬೆಳಗೊಳ ಮೂಲಕ ಸಾಗುವ ಗೋಮಟೇಶ್ವರ ರೈಲು ಮತ್ತೆ ಆರಂಭಗೊಂಡಿದ್ದು ಯವಂತಪುರದಿಂದ ರವಿವಾರ, ಮಂಗಳವಾರ ಮತ್ತು ಗುರುವಾರ ಹೀಗೆ ವಾರದಲ್ಲಿ ಮೂರು ದಿನ ಪ್ರಯಾಣಿಸುತ್ತದೆ. ಯಶವಂತಪುರದಿಂದ ಹೊರಟು ಚಿಕ್ಕಬಾಣಾವರ, ಹಾಸನ, ಶ್ರವಣಬೆಳಗೊಳ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ- ಪುತ್ತೂರು, ಬಂಟವಾಳ ಮೂಲಕ ಮಂಗಳೂರಿಗೆ ಹೋಗುತ್ತದೆ. ಗೊಮ್ಮಟೇಶ್ವರ ರೈಲು ಸೇವೆ ಪುನಾರಂಭಗೊಳ್ಳುತ್ತಿದ್ದಂತೆ ಟಿಕೆಟ್ ಬುಕ್ಕಿಂಗ್ ಸಹ ಆರಂಭಗೊಂಡಿದೆ. ಪ್ರಯಾಣಕ್ಕೂ ಮುನ್ನ ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://www.indianrail.gov.in ಭೇಟಿ ನೀಡಬೇಕು. ರೈಲಿನ ಸೇವೆ ಬಗ್ಗೆ ಮಾಹಿತಿ, ಟಿಕೆಟ್, ಮಾರ್ಗ ಇತರ ಮಾಹಿತಿಗಾಗಿ ಸಹಾಯವಾಣಿ 139ಕ್ಕೆ ಕರೆ ಮಾಡುವಂತೆ ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
Railway authorities have announced the resumption of the Yeshwantpur–Mangaluru–Karwar Gomateshwara Express (Train No. 16575/16576), bringing relief to passengers traveling to the coastal region. The train service, which was suspended for six months due to electrification and infrastructure works on the Yeshwantpur–Hassan–Sakleshpur route, has now been restarted.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am