ಬ್ರೇಕಿಂಗ್ ನ್ಯೂಸ್
24-12-25 10:26 pm HK News Desk ಕರ್ನಾಟಕ
ಶಿವಮೊಗ್ಗ, ಡಿ 24 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕನ್ನೆಕೊಪ್ಪ ಹೊಸೂರು ಬಳಿ ಇಂದು ಮುಂಜಾನೆ ನಡೆದಿದೆ. ಕಾರು ಕೆರೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿಕಾರಿಪುರ ತಾಲೂಕಿನ ಪುನೇದಹಳ್ಳಿ ಗ್ರಾಮ ನಿವಾಸಿ ನವೀನ್(21) ಹಾಗೂ ರಾಮಚಂದ್ರ(37) ಮೃತರು. ರುದ್ರೇಶ್(26) ಹಾಗೂ ಮಂಜುನಾಥ್(21) ಇಬ್ಬರು ಪ್ರಾಣಾಪಾಯದಿಂದ ಪರಾಗಿದ್ದಾರೆ. ರಾಮಚಂದ್ರ ಕಾರನ್ನು ಚಲಾಯಿಸುತ್ತಿದ್ದರು.
ಇಂದು ಬೆಳಗಿನಜಾವ ಕಾರು ಶಿಕಾರಿಪುರದ ಪುನೇದಹಳ್ಳಿಯಿಂದ ಆನವಟ್ಟಿ ಕಡೆ ಮಾರುತಿ ಸುಜುಕಿ ಇಕೊ ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿದೆ. ಸ್ಥಳಕ್ಕೆ ಆನವಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂತಹದ್ದೇ ಮತ್ತೊಂದು ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಸಂಭವಿಸಿದೆ. ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಕ್ಕಲಕೋಟೆ ಪಟ್ಟಣದ ದೇವಿನಗರದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಬುಧವಾರ (ಇಂದು) ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಮೃತರನ್ನು ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಪ್ರಸಾದ್ ರಾವ್ (75), ಸಿರುಗುಪ್ಪ ನಿವಾಸಿಗಳಾದ ವಿಜಯ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರರಾವ್ (45) ಅವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಹಿಂತಿರುಗಿ ಬರುವಾಗ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದರು. ಚಾಲಕ ನಿದ್ದೆ ಮಂಪರಿನಲ್ಲಿ ಚಾಲನೆ ಮಾಡಿರುವುದು ಹಾಗೂ ಮಂಜುಗಟ್ಟಿದ ವಾತಾವರಣದ ಹಿನ್ನೆಲೆ ರಸ್ತೆ ಕಾಣದೇ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two people died after a car lost control and fell into a lake near Annevatti in Shivamogga district early Tuesday, while two others narrowly survived. In a separate accident in Ballari’s Siruguppa taluk, three members of the same family were killed and two seriously injured when their car rammed into a small bridge amid dense fog. Police have registered both cases and preliminary reports suggest overspeeding and poor visibility as possible causes.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm