ಬ್ರೇಕಿಂಗ್ ನ್ಯೂಸ್
25-12-25 06:26 pm HK News Desk ಕರ್ನಾಟಕ
ಬೆಂಗಳೂರು, ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಸಾಫ್ಟ್‌ವೇರ್ ತಂತ್ರಜ್ಞ ಯುವತಿಯರು ಸುಟ್ಟು ಹೋಗಿ ಕಣ್ಮರೆಯಾಗಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಸುಟ್ಟು ಕರಕಲಾಗಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾದವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಎಷ್ಟು ಮಂದಿ ಸಾವಿಗೀಡಾಗಿದ್ದಾರೆ, ಬದುಕಿದವರೆಷ್ಟು, ಯಾರೆಲ್ಲ ಎನ್ನುವ ಬಗ್ಗೆ ಖಚಿತ ಮಾಹಿತಿ ದೊರಕಿಲ್ಲ.
ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯಾ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಮೃತಪಟ್ಟಿದ್ದು ಇಬ್ಬರೂ ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಿಂದ ಬುಧವಾರ ರಾತ್ರಿ ಸ್ನೇಹಿತೆ ಮಿಲನ ಜೊತೆ ಬಸ್ ಹತ್ತಿ ಹೊರಟಿದ್ದರು. ಘಟನೆಯಲ್ಲಿ ಮಿಲನ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಇಬ್ಬರು ಸಾವನ್ನಪ್ಪಿದ ಶಂಕೆ ಇದೆ.
ಮಕ್ಕಳನ್ನು ಕಾಣದೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಚಿತ್ರದುರ್ಗಕ್ಕೆ ಬಂದಿರುವ ನವ್ಯಾ ತಂದೆ ಮಂಜಪ್ಪ, ಮಗಳೇ ಎಲ್ಲಿ ಹೋದ್ಯಮ್ಮ? ಎಂದು ಕಣ್ಣೀರಿಡುತ್ತಿದ್ದು ಹೃದಯ ಕಲಕಿದೆ. ಇದೇ ವೇಳೆ, ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಳಗ್ಗೆ 7 ಗಂಟೆಗೆ ವಿಷಯ ಗೊತ್ತಾಗಿದೆ. ಮಿಲನಾ ಫೋನ್ ಮಾಡಿ ವಿಷಯ ತಿಳಿಸಿದಳು. ನವ್ಯಾ, ಮಾನಸ, ಮಿಲನಾ ಮೂವರು ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಮೂವರು ಒಟ್ಟಿಗೆ ಇಂಜಿನಿಯರಿಂಗ್ ಓದಿ, ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಸದ್ಯ ರಜೆ ಇತ್ತು ಎಂಬ ಕಾರಣಕ್ಕೆ ಸಿಗಂದೂರಿಗೆ ಹೊರಟಿದ್ದರು. ನನಗೆ ಒಬ್ಬನೇ ಮಗ ಹಾಗೂ ಒಬ್ಬಳೇ ಮಗಳಿದ್ದಾಳೆ. ಎಪ್ರಿಲ್‌ನಲ್ಲಿ ನವ್ಯಾ ಮದುವೆ ಫಿಕ್ಸ್ ಆಗಿತ್ತು. ಎಲ್ಲ ಕಡೆ ಹುಡುಕಾಡಿದ್ದೇವೆ, ಸಿಗಲಿಲ್ಲ. ಪೊಲೀಸರಿಗೂ ಮಾಹಿತಿ ನೀಡಿದ್ದೇವೆ. ಎಲ್ಲಿದ್ಯಮ್ಮ? ನನ್ನ ಮಗಳನ್ನು ಹುಡುಕಿಕೊಡಿ ಎಂದು ಗೋಗರೆಯುತ್ತಿದ್ದಾರೆ.
ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ. ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸಿನ ಡೀಸೆಲ್ ಟ್ಯಾಂಕಿಗೆ ಬೆಂಕಿ ಹತ್ತಿಕೊಂಡು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ.
In a horrific road accident near Hiriyur in Chitradurga district, two young women from Channarayapatna in Hassan district are feared dead after a private sleeper bus caught fire following a collision with a truck. Several passengers were burnt beyond recognition, leaving families struggling to identify their loved ones.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm