ಬ್ರೇಕಿಂಗ್ ನ್ಯೂಸ್
30-12-25 05:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ದಂಪತಿಯ ಪುತ್ರ ರೈಹಾನ್ ವಾದ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ರೈಹಾನ್ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ. ಇವರ ಸಂಬಂಧಕ್ಕೆ ಉಭಯ ಕುಟುಂಬಗಳೂ ಹಸಿರು ನಿಶಾನೆ ತೋರಿಸಿದ್ದು, ಶೀಘ್ರದಲ್ಲೇ ವಿವಾಹದ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.


ರೈಹಾನ್ ವಾದ್ರಾ ವೃತ್ತಿಯಲ್ಲಿ ಒಬ್ಬ ಪರಿಣಿತ ಛಾಯಾಗ್ರಾಹಕ. ತನ್ನ ಹತ್ತನೇ ವಯಸ್ಸಿಗೇ ಕ್ಯಾಮೆರಾ ಕೈಗೆತ್ತಿಕೊಂಡ ರೈಹಾನ್ ವನ್ಯಜೀವಿ, ಬೀದಿ ಛಾಯಾಗ್ರಹಣ ಮತ್ತು ಕಮರ್ಷಿಯಲ್ ಫೋಟೋಗ್ರಫಿಯಲ್ಲಿ ಗುರುತಿಸಿದ್ದಾರೆ. ಹಾಗೆಯೇ ಅವಿವಾ ಬೇಗ್ ಮೂಲತಃ ದೆಹಲಿ ಮೂಲದವರಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ ಆಗಿದ್ದಾರೆ. ದೆಹಲಿಯಲ್ಲಿ 'ಅಟೆಲಿಯರ್ 11' ಎಂಬ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದಾರೆ.
ಇದಲ್ಲದೆ ರಾಷ್ಟ್ರಮಟ್ಟದ ಮಾಜಿ ಫುಟ್ಬಾಲ್ ಆಟಗಾರ್ತಿ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದು ಶೀಘ್ರದಲ್ಲೇ ಮದುವೆ ದಿನಾಂಕವನ್ನು ಕುಟುಂಬ ಘೋಷಣೆ ಮಾಡಲಿದೆ. ರೈಹಾನ್ ವಾದ್ರಾ ಡೆಹ್ರಾಡೂನ್ನ ದಿ ಡೂನ್ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಅದೇ ಶಾಲೆಯಲ್ಲಿ ಅಧ್ಯಯನ ನಡೆಸಿದ್ದರು. ನಂತರ ಉನ್ನತ ಶಿಕ್ಷಣಕ್ಕಾಗಿ ಲಂಡನ್ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್ ಗೆ ತೆರಳಿದ್ದರು.
Raihan Vadra, son of Priyanka Gandhi and Robert Vadra, has gotten engaged to his childhood friend and longtime partner Aviva Baig. The couple, together for over seven years, exchanged rings in a private ceremony attended by close family. Raihan, a professional photographer, and Aviva, a photographer and producer, are expected to announce their wedding date soon.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am