ಬ್ರೇಕಿಂಗ್ ನ್ಯೂಸ್
31-12-25 10:57 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.31 : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ಬಿಜೆಪಿ ತನ್ನ ಸತ್ಯಶೋಧನಾ ಸಮಿತಿ ರಚಿಸಿದ್ದು, ವಿವರವಾದ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ.
ಸರ್ಕಾರಿ ಭೂಮಿ ಅತಿಕ್ರಮಣ ತೆರವುಗೊಳಿಸುವ ಅಭಿಯಾನದ ಭಾಗವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಬುಧವಾರ "ಸತ್ಯ ಶೋಧನಾ ಸಮಿತಿ"ಯನ್ನು ರಚಿಸಿದ್ದಾರೆ. ಏಳು ಸದಸ್ಯರ ಈ ಸಮಿತಿಯು ಶಾಸಕರಾದ ಎಸ್.ಆರ್ ವಿಶ್ವನಾಥ್ ಮತ್ತು ಎಸ್ ಮುನಿರಾಜು ಸೇರಿದಂತೆ ಬಿಜೆಪಿ ಶಾಸಕರು ಮತ್ತು ನಾಯಕರನ್ನು ಒಳಗೊಂಡಿದೆ.
ಬೆಂಗಳೂರು ನಗರ ಉತ್ತರ ಭಾಗದ ಯಲಹಂಕದ ಕೋಗಿಲು ಬಳಿಯ ಫಕೀರ್ ಕಾಲೋನಿ ಮತ್ತು ವಾಸಿಂ ಲೇಔಟ್ನಲ್ಲಿ ಮನೆಗಳನ್ನು ಕೆಡವಿದ ಹಿಂದಿನ ಸತ್ಯ ಅರಿಯಲು ಸಮಿತಿಯನ್ನು ರಚಿಸಲಾಗಿದೆ ಎಂದು ವಿಜಯೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಮಿತಿಯು ಸ್ಥಳಕ್ಕೆ ಭೇಟಿ ನೀಡಿ, ವಿಚಾರಣೆ ನಡೆಸಿ ಒಂದು ವಾರದೊಳಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಡಿಸೆಂಬರ್ 20 ರಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಪ್ರಸ್ತಾವಿತ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕಾಗಿ ಅತಿಕ್ರಮಣಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಯಾವುದೇ ಅಧಿಕೃತ ಅನುಮತಿಯಿಲ್ಲದೆ ಮನೆಗಳನ್ನು ನಿರ್ಮಿಸಲಾಗಿದೆ ಎಂಬುದನ್ನು ಮನಗಂಡು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬುಧವಾರ ಕೋಗಿಲು ಬಡಾವಣೆಗೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, 'ಕಾಂಗ್ರೆಸ್ ಸರ್ಕಾರವು ತನ್ನ ಓಲೈಕೆ ರಾಜಕೀಯದಿಂದಾಗಿ ರಾಜ್ಯದಲ್ಲಿ 'ಮಿನಿ ಬಾಂಗ್ಲಾದೇಶ'ವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು. ಅಕ್ರಮ ಮನೆಗಳನ್ನು ಕೆಡವಿದರೂ ಇನ್ಯಾರದ್ದೋ ಒತ್ತಡದಿಂದ ಹೊರ ರಾಜ್ಯಗಳ ಜನರಿಗೆ ಮನೆಗಳನ್ನು ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ, ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಸರ್ಕಾರ ಕೇವಲ ಮುಸ್ಲಿಂ ಓಲೈಕೆಗಾಗಿ ಈ ರೀತಿ ಮಾಡುತ್ತಿದ್ದಾರೆ. ಹಾಗಾದ್ರೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಮನೆ ಕಳಕೊಂಡ 13 ಸಾವಿರ ಮಂದಿಗೆ ಏನು ಮಾಡುತ್ತದೆ, ಅವರು ಮನುಷ್ಯರಲ್ವಾ ಎಂದು ಪ್ರಶ್ನಿಸಿದರು.
The BJP has formed a seven-member fact-finding committee to investigate the demolition of alleged illegal migrant homes in Bengaluru’s Kogilu Layout. Karnataka BJP president B.Y. Vijayendra directed the committee to inspect the site and submit a detailed report within a week.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm