Ballari SP Pavan Nejjur suspended: ಬಳ್ಳಾರಿ ಘರ್ಷಣೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ; ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಎಸ್ಪಿ ಪವನ್ ನೆಜ್ಜೂರ್ ಅಮಾನತು 

02-01-26 10:24 pm       HK News Desk   ಕರ್ನಾಟಕ

ಬ್ಯಾನರ್ ಕಟ್ಟುವ ವಿಚಾರದಲ್ಲಿ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಳ್ಳಾರಿ, ಜ.2 : ಬ್ಯಾನರ್ ಕಟ್ಟುವ ವಿಚಾರದಲ್ಲಿ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ವಿಜಯನಗರ ಜಿಲ್ಲೆಯ ಲೋಕಾಯುಕ್ತ ವಿಭಾಗದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಡಿಸೆಂಬರ್ 31 ರಂದು ಬಳ್ಳಾರಿ ಎಸ್ ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. 

ಒಂದೂವರೆ ವರ್ಷದಿಂದ ಬಳ್ಳಾರಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಶೋಭಾರಾಣಿ ವಿ.ಜೆ. ಅವರನ್ನು ಮಂಡ್ಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಪವನ್ ನೆಜ್ಜೂರ್ ಅವರನ್ನು ವರ್ಗಾಯಿಸಲಾಗಿತ್ತು. ನಿನ್ನೆ ಸಂಜೆಯ ವೇಳೆಗೆ ಗಲಾಟೆ ನಡೆದು ಪೊಲೀಸರ ಸಮ್ಮುಖದಲ್ಲಿಯೇ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿತ್ತು.‌ ಘಟನೆಗೆ ಪೊಲೀಸ್ ಅಧಿಕಾರಿಗಳ ಲೋಪವೇ ಕಾರಣವೆಂಬ ಆರೋಪ ಕೇಳಿಬಂದಿತ್ತು.

One day after assuming office, Ballari SP Pavan Nejjur was suspended by the Karnataka government following the violent banner dispute that escalated into a clash, resulting in the death of a Congress worker by gunfire. Authorities cited mishandling of the situation and failure to brief senior officials as reasons for his suspension. Nejjur, who was transferred from the Vijayapura Lokayukta wing on December 31, took charge just hours before the violence erupted, allegedly due to lapses in police oversight.