ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ್ಟಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಹತ್ಯೆ ಮಾಡಕ್ಕಾಗುತ್ತಾ..? ಡಿಸಿಎಂ ಡಿಕೆಶಿ ಲೇವಡಿ 

03-01-26 10:40 pm       Bangalore Correspondent   ಕರ್ನಾಟಕ

ಜನಾರ್ದನ ರೆಡ್ಡಿ ಅವರು ದೊಡ್ಡ ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಬೇಕಾದಲ್ಲಿ ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ, ಸುಲಭದಲ್ಲಿ ಕೊಲ್ಲುವುದಕ್ಕೆ ಸಾಧ್ಯವೇ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಜನಾರ್ದನ ರೆಡ್ಡಿ ತನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ಮಾಡಿದ ಆರೋಪಕ್ಕೆ ಡಿಕೆಶಿ ಹೀಗೆಂದು ಕೌಂಟರ್ ನೀಡಿದ್ದಾರೆ. ‌

ಬೆಂಗಳೂರು, ಜ.3 : ಜನಾರ್ದನ ರೆಡ್ಡಿ ಅವರು ದೊಡ್ಡ ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಬೇಕಾದಲ್ಲಿ ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ, ಸುಲಭದಲ್ಲಿ ಕೊಲ್ಲುವುದಕ್ಕೆ ಸಾಧ್ಯವೇ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಜನಾರ್ದನ ರೆಡ್ಡಿ ತನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ಮಾಡಿದ ಆರೋಪಕ್ಕೆ ಡಿಕೆಶಿ ಹೀಗೆಂದು ಕೌಂಟರ್ ನೀಡಿದ್ದಾರೆ. ‌

ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯ ಪುತ್ಥಳಿ ನಿರ್ಮಿಸುತ್ತಿದ್ದು ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ, ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಜನಾರ್ದನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ ಎಂದು ಡಿಸಿಎಂ ಪ್ರಶ್ನಿಸಿದ್ದಾರೆ. ಪಕ್ಷದ ವತಿಯಿಂದ ಅಲ್ಲಿನ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಘಟನೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ನನಗೆ ಈ ಘಟನೆ ತಿಳಿದ ತಕ್ಷಣ ಎಸ್ಪಿ ಜೊತೆ ಮಾತನಾಡಿದ್ದೇನೆ. ಎಸ್ಪಿ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೆ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್ಪಿ, ಐಜಿ ಮತ್ತು ಶಾಸಕರ ಜೊತೆಗೂ ಮಾತನಾಡಿದ್ದೇನೆ ಎಂದು ಡಿಸಿಎಂ ಹೇಳಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ, ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ನನಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅಲ್ಲಿ ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. 

ಬಳ್ಳಾರಿಯಲ್ಲಿ ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನು ಆಗಿದೆ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.