ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ ಯುವತಿ ಸಾವು 

05-01-26 08:39 pm       Bangalore Correspondent   ಕರ್ನಾಟಕ

ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಮಂಗಳೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ ಯುವತಿಯೊಬ್ಬಳು ಉಸಿರು ಗಟ್ಟಿ ಮೃತಪಟ್ಟ ಘಟನೆ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮಂಗಳೂರಿನ ಕಾವೂರು ಮೂಲದ ಶರ್ಮಿಳಾ (34) ಮೃತ ಯುವತಿ. 

ಬೆಂಗಳೂರು, ಜ.5 : ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಮಂಗಳೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ ಯುವತಿಯೊಬ್ಬಳು ಉಸಿರು ಗಟ್ಟಿ ಮೃತಪಟ್ಟ ಘಟನೆ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮಂಗಳೂರಿನ ಕಾವೂರು ಮೂಲದ ಶರ್ಮಿಳಾ (34) ಮೃತ ಯುವತಿ. 

ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದು ಮನೆ ಸಮೀಪದ ಸಾಫ್ಟ್ ವೇರ್ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಇದ್ದುದರಿಂದ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಶರ್ಮಿಳಾ ಒಬ್ಬರೇ ಮನೆಯಲ್ಲಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಮನೆಯ ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ. ಪಕ್ಕದ ಕೋಣೆಯಲ್ಲಿದ್ದ ಶರ್ಮಿಳಾ ಕೂಡಲೇ ಆ ಕೋಣೆಗೆ ತೆರಳಿದ್ದು ಅದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. 

ಹೀಗಾಗಿ ಕತ್ತಲೆಯಲ್ಲಿ ಕಿಟಕಿ, ಬಾಗಿಲು ತೆರೆಯಲು ಸಾಧ್ಯವಾಗದೆ ಮನೆಯಲ್ಲಿ ಪೂರ್ತಿ ಹೊಗೆ ಆವರಿಸಿತ್ತು. ಹೊರಗೆ ಹೋಗಲು ಸಾಧ್ಯವಾಗದೆ ಯುವತಿ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಶರ್ಮಿಳಾ ಒಂದು ವರ್ಷದ ಹಿಂದೆ ಕೆಲಸ ಅರಸಿ ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದು ಇದೀಗ ದುರಂತ ರೀತಿ ಸಾವಿಗೀಡಾಗಿದ್ದಾರೆ.  ಮನೆಯ ರೂಮ್ ನಲ್ಲಿದ್ದ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟು ಹೋಗಿವೆ.

A 34-year-old software engineer from Mangaluru, Sharmila, died after inhaling dense smoke caused by a sudden fire in her apartment at Subramanya Layout, RM Nagar limits. The incident occurred around 11 pm on Saturday when a suspected short circuit triggered flames and heavy smoke inside her room.