ಬ್ರೇಕಿಂಗ್ ನ್ಯೂಸ್
07-01-26 03:07 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.7 : ಬಿಜೆಪಿ ಕಾರ್ಯಕರ್ತ ಮಹಿಳೆಯನ್ನು ಇಲ್ಲಿನ ಕೇಶ್ವಾಪುರ ಪೊಲೀಸರು ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿನ ಮಾಡಿ ಕರೆದೊಯ್ಯುವ ವೇಳೆ ಹಲ್ಲೆಗೈದು ವಿವಸ್ತ್ರಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಪೊರೇಟರ್ ಕೊಟ್ಟ ದೂರಿನ ಮೇಲೆ ಬಿಜೆಪಿ ಮಹಿಳಾ ಕಾರ್ಯಕರ್ತೆಯ ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಈ ವೇಳೆ ಬಟ್ಟೆ ಹರಿದುಕೊಂಡ ಘಟನೆ ನಡೆದಿದೆ.
ಜನವರಿ 1ರಂದು ಮತಪಟ್ಟಿ ಪರಿಷ್ಕರಣೆ ಸಂಬಂಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಬಿಜೆಪಿಯ ಸುಜಾತಾ ಹಂಡಿ ಎಂಬವರು ಅಧಿಕಾರಿಗಳ ಜೊತೆ ಸೇರಿ ಮತದಾರ ಪಟ್ಟಿಯಿಂದ ಮತದಾರರನ್ನು ತೆರವು ಮಾಡುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಆರೋಪ ಮಾಡಿದ್ದರು. ಈ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿ ಸುಜಾತಾ ವಿರುದ್ಧ ದೂರು ದಾಖಲಾಗಿತ್ತು. ಇದರಂತೆ, ಪೊಲೀಸರು ಸುಜಾತಾ ಬಂಧನಕ್ಕೆ ತೆರಳಿದ್ದು ಈ ವೇಳೆ ಪೊಲೀಸರು ಆಕೆಯನ್ನು ಬಂಧಿಸಿ ಕರೆದೊಯ್ಯುವ ವೇಳೆ ರಂಪ ಆಗಿದೆ. ಎಳೆದಾಡಿದ ವೇಳೆ ಬಟ್ಟೆ ಹರಿದಿದ್ದು ಪೊಲೀಸರ ವರ್ತನೆ ಬಗ್ಗೆ ಟೀಕೆ ಕೇಳಿಬಂದಿದೆ. ಪೊಲೀಸರು ವಾಹನಕ್ಕೆ ಹತ್ತಿಸುವ ವೇಳೆ ಎಳೆದಾಡಿದ್ದಾರೆಂದು ಕುಟುಂಬ ಸದಸ್ಯರು ಆರೋಪಿಸಿದ್ದು ಇದರ ವಿಡಿಯೋ ವೈರಲ್ ಆಗದೆ.


ಪೊಲೀಸರು ಮಹಿಳೆಯ ಬಟ್ಟೆ ಬಿಚ್ಚಿ ಥಳಿಸಿದ್ದಾರೆಂದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್, “ಪೊಲೀಸರು ಮಹಿಳೆಯ ಮೇಲೆ ಹಲ್ಲೆ ಮಾಡಿಲ್ಲ. ಬಂಧನದ ವೇಳೆ ಪ್ರತಿರೋಧ ಒಡ್ಡಿದ ಸಂತ್ರಸ್ತೆಯೇ ಸ್ವತಃ ತನ್ನ ಬಟ್ಟೆಗಳನ್ನು ಹರಿದುಕೊಂಡಿದ್ದಾಳೆ. ಅಲ್ಲದೆ, ಪೊಲೀಸರಿಗೆ ಕಚ್ಚಿ ಗಾಯಗೊಳಿಸಲು ಪ್ರಯತ್ನಿಸಿದ್ದಾಳೆ. ಈ ಬಗ್ಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಬಂಧನದ ಸಂದರ್ಭದಲ್ಲಿ ಪೊಲೀಸರ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರು ದಾಖಲಾಗಿದೆ. ಇದೀಗ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಬದಿಗಿಟ್ಟು ಕೇಶ್ವಾಪುರ ಪೊಲೀಸರೇ ಆಕೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
A controversy has erupted after allegations that Keshwapur police in Hubballi manhandled and partially stripped a BJP woman worker while taking her into custody in connection with an assault case. The arrest was made based on a complaint filed by a Congress Corporator, and during the arrest, the woman’s clothes were torn, leading to widespread criticism of the police’s behaviour.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am