ಬ್ರೇಕಿಂಗ್ ನ್ಯೂಸ್
09-01-26 04:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.9 : ಕೇರಳ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ ಗಡಿಭಾಗದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಈ ಮಸೂದೆ ಜಾರಿಗೊಳಿಸದೆ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ ನಿರ್ಲಕ್ಷಿಸಿ ಅವರ ಮೇಲೆ ಮಲಯಾಳ ಭಾಷೆಯನ್ನು ಹೇರಿದಲ್ಲಿ ನಮ್ಮ ಸರ್ಕಾರ ಅವರ ಜೊತೆಗೆ ನಿಂತು ಬೆಂಬಲ ನೀಡಲಿದೆ ಎಂದಿದ್ದಾರೆ.
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾದಿಸುತ್ತೇನೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಎಕ್ಸ್ ಸಂದೇಶದಲ್ಲಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.
ಕಾಸರಗೋಡು ಜಿಲ್ಲೆ ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಏನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಆಗ್ರಹಿಸುತ್ತೇನೆ. ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರ ಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ.
— Siddaramaiah (@siddaramaiah) January 8, 2026
ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ… pic.twitter.com/4LNY2Dk10D
Karnataka Chief Minister Siddaramaiah has urged Kerala Chief Minister Pinarayi Vijayan to immediately withdraw the proposed Malayalam Language Bill 2025, warning that it would severely affect Kannadigas living in the border district of Kasaragod. In a detailed post on X, Siddaramaiah said making Malayalam mandatory as the first language in Kannada-medium schools violates constitutional guarantees of linguistic freedom and suppresses the rights of linguistic minorities.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm