ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ಎಸ್ಐಟಿ ತನಿಖೆಗೆ ಅರ್ಜಿ, ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿದ ಹೈಕೋರ್ಟ್ 

14-01-26 01:34 pm       Bangalore Correspondent   ಕರ್ನಾಟಕ

ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ನಡೆದಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಬಗ್ಗೆ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶಿಸುವಂತೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿ ಕುರಿತಾಗಿ ಅಭಿಪ್ರಾಯ ತಿಳಿಸುವಂತೆ ಹೈಕೋರ್ಟ್‌, ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಬೆಂಗಳೂರು, ಜ.14 : ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ನಡೆದಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಬಗ್ಗೆ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶಿಸುವಂತೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿ ಕುರಿತಾಗಿ ಅಭಿಪ್ರಾಯ ತಿಳಿಸುವಂತೆ ಹೈಕೋರ್ಟ್‌, ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು ವಕೀಲರ ವಾದ ಆಲಿಸಿ ಸರ್ಕಾರದ ಪರ ವಕೀಲರ ಅಭಿಪ್ರಾಯ ಕೇಳಿತು. 

ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಅದರ ತನಿಖೆಗೆ ಎಸ್‌ಐಟಿಗೆ ಸೂಚಿಸಬೇಕು ಎಂದು ಮನವಿ ಮಾಡಲಾಗಿದೆ. ‌

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 74 ಅಸಹಜ ಸಾವು ಪ್ರಕರಣಗಳು ವರದಿಯಾಗಿದ್ದು ಇವುಗಳ ತನಿಖೆ ಮಾಡಲೆಂದು ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಆದರೆ, ಎಸ್ಐಟಿ ಕೇವಲ ಒಂದು ಎಫ್ಐಆರ್ ದಾಖಲಿಸಿ ಅದರ ಬಗ್ಗೆ ಮಾತ್ರ ತನಿಖೆ ನಡೆಸುತ್ತಿದೆ. ಉಳಿದ 74 ಕೊಲೆ, ಯುವತಿಯರ ನಾಪತ್ತೆ, ಸಾವು ಪ್ರಕರಣಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಅರ್ಜಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ್ ರಾವ್ ಅವರ ಪೀಠವು ಆಲಿಸಿದೆ. ಕುಸುಮಾವತಿ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್, “ಧರ್ಮಸ್ಥಳದ ಠಾಣೆ ವ್ಯಾಪ್ತಿಯೊಂದರಲ್ಲೇ 74 ಅಸಹಜ ಸಾವುಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಗಳ ತನಿಖೆ ಮಾಡಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿದ್ದರೂ ಒಂದು ಎಫ್ಐಆರ್ ಮಾತ್ರ ದಾಖಲಿಸಿದೆ. ಉಳಿದ 74 ಕೊಲೆ, ನಾಪತ್ತೆ, ಸಾವು ಪ್ರಕರಣಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ. ಇದು ಸರಿಯಾದ ಕ್ರಮವಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಪ್ರತಿವಾದ ಮಂಡಿಸಿದ ಸರ್ಕಾರದ ಪರ ವಕೀಲರು, ಸರ್ಕಾರಕ್ಕೆ ಇನ್ನೂ ಈ ಕುರಿತಾಗಿ ಮಾಹಿತಿ ನೀಡಿಲ್ಲ. ದಾಖಲೆ ಇಲ್ಲದೇ ಸರ್ಕಾರ ಅಭಿಪ್ರಾಯ ಹೇಳಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ವಾದ ಆಲಿಸಿದ ಪೀಠವು, 74 ಅಸಹಜ ಸಾವುಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ ಎಂಬುದರ ಕುರಿತು ಅರ್ಜಿ ಇದೆ. ಸರ್ಕಾರವು ನ್ಯಾಯಾಲಯದಲ್ಲಿ ಲಭ್ಯವಿರುವ ದಾಖಲೆಯನ್ನು ಪಡೆದು ಅಭಿಪ್ರಾಯ ಸಲ್ಲಿಸಬೇಕು ಎಂದು ಸೂಚಿಸಿದೆ. ಅರ್ಜಿ ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮಂದೂಡಿದೆ.

The Karnataka High Court has sought the state government’s opinion on a petition filed by Kusumavathi, mother of Soujanya, seeking registration of separate FIRs and a Special Investigation Team (SIT) probe into 74 alleged unnatural death cases reported in Dharmasthala between 1990 and 2021.