ಬ್ರೇಕಿಂಗ್ ನ್ಯೂಸ್
14-01-26 02:54 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಆನೆ ದಂತದಿಂದ ಮಾಡಿರುವ ರಾಧೆ ಮತ್ತು ಕೃಷ್ಣರ ವಿಗ್ರಹವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಇನ್ನೊಬ್ಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬನಶಂಕರಿ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮೊಹಮ್ಮದ್ ಶಬೀರ್ ಅಹಮದ್(50) ಮತ್ತು ಬೆಂಗಳೂರಿನ ಸುಧಾಮ ನಗರ ನಿವಾಸಿ ನರೇಂದ್ರ ಶರ್ಮಾ(45) ಬಂಧಿತರು. ನರೇಂದ್ರ ಶರ್ಮಾ, ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಇದರ ಜೊತೆಗೆ ಪಾರ್ಟ್ ಟೈಮಲ್ಲಿ ರಿಯಲ್ ಎಸ್ಟೇಟ್ ಕೆಲಸವನ್ನೂ ಮಾಡಿಕೊಂಡಿದ್ದ.
120 ವರ್ಷಕ್ಕೂ ಹಳೆಯದಾದ ಆನೆ ದಂತದ ವಿಗ್ರಹಗಳು ಎನ್ನಲಾಗಿದ್ದು ಮಾರುಕಟ್ಟೆಯಲ್ಲಿ 20 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುತ್ತದೆ. ವಿಗ್ರಹವನ್ನು ಆರೋಪಿಗಳು ಮಾರಾಟ ಮಾಡುವ ಉದ್ದೇಶದಿಂದ
ಕೊಪ್ಪ ಗೇಟ್ ಸಮೀಪ ತಂದಿದ್ದರು. ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ದಾಳಿ ನಡೆಸಿದ್ದು ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿದೆ. ವಿಗ್ರಹ ಸಮೇತವಾಗಿ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
ಬಂಧಿತರಿಂದ ರಾಧಾ ಕೃಷ್ಣರ ವಿಗ್ರಹಗಳು, ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮತಿ ಪಡೆಯದೆ ಆನೆದಂತ ವಿಗ್ರಹ ಇಟ್ಟುಕೊಂಡಿದ್ದು ಮತ್ತು ಕಾನೂನು ಬಾಹಿರವಾಗಿ ವಿಗ್ರಹಗಳ ಮಾರಾಟ ಮಾಡಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ. ಆನೆ ದಂತದ ವಿಗ್ರಹಗಳನ್ನ ಬಳಿಕ ಬನ್ನೇರುಘಟ್ಟ ರಾಷ್ಟೀಯ ಉದ್ಯಾನವನಕ್ಕೆ ರವಾನಿಸಲಾಗಿದೆ.
ಪರಿಶೀಲನೆ ಬಳಿಕ ಎಷ್ಟು ವರ್ಷ ಹಳೆಯದಾದ ಆನೆದಂತ ಎಂದು ತಜ್ಞರು ವರದಿ ನೀಡಲಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jigani police have arrested a software engineer and a real estate businessman for allegedly attempting to illegally sell idols of Radha and Krishna carved from elephant ivory. The accused, identified as Mohammed Shabir Ahmed (50), a real estate entrepreneur from Banashankari, and Narendra Sharma (45), a software engineer from Sudhamanagar, were caught with the idols near Koppa Gate following a tip-off.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm