ಬ್ರೇಕಿಂಗ್ ನ್ಯೂಸ್
14-01-26 03:34 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಧರ್ಮಸ್ಥಳದಲ್ಲಿ ಅಸಹಜ ಸಾವು ಪ್ರಕರಣದಲ್ಲಿ ಎಸ್ಐಟಿ ತನಿಖೆಯ ಮಾಹಿತಿ ಕೋರಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ತನಿಖೆಗೆ ಎಸ್ಐಟಿ ರಚನೆಯಾಗಿತ್ತು. ಪ್ರಕರಣದಲ್ಲಿ ಆರು ತಿಂಗಳ ಕಾಲ ತನಿಖೆ ನಡೆಸಿದ ಎಸ್ಐಟಿ ಬಳಿಕ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಮತ್ತು ಬೆಳ್ತಂಗಡಿ ಕೋರ್ಟಿಗೆ ವರದಿ ಸಲ್ಲಿಸಿತ್ತು. ಇದೀಗ ತನಿಖೆಯ ಮಾಹಿತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದಾರೆ.
ಪ್ರಕರಣದಲ್ಲಿ ಎಸ್ಐಟಿ ಇದುವರೆಗೆ ತನಿಖೆ ನಡೆಸಿರುವ ಮಾಹಿತಿ ಮತ್ತು ತನಿಖೆಯ ಪ್ರಗತಿ ಬಗ್ಗೆ ಅರಿಯಲು ಮಹಿಳಾ ಆಯೋಗದ ಅಧ್ಯಕ್ಷೆ ಮುಂದಾಗಿದ್ದಾರೆ. ಧರ್ಮಸ್ಥಳದಲ್ಲಿ ಅಸಹಜ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಮೊದಲಿಗೆ ಬೆಳ್ತಂಗಡಿ ಕೋರ್ಟಿಗೆ ದೂರು ಸಲ್ಲಿಕೆಯಾದ ಸಂದರ್ಭದಲ್ಲಿ ಸಮಗ್ರ ತನಿಖೆ ಸಲುವಾಗಿ ಎಸ್ಐಟಿ ರಚಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸರ್ಕಾರಕ್ಕೆ ಪತ್ರ ಬರೆದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದರು. ಇದರಂತೆ, ಸಿಎಂ ಸಿದ್ದರಾಮಯ್ಯ ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದರು.
ಈ ನಡುವೆ, ಎಸ್ಐಟಿ ತನಿಖೆ ಆಗುತ್ತಿರುವಾಗಲೇ ಮಹಿಳಾ ಆಯೋಗದ ಅಧ್ಯಕ್ಷರು ಎಸ್ಐಟಿ ಅಧಿಕಾರಿಗಳು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಆಕ್ಷೇಪಿಸಿದ್ದರು. ತನಿಖೆ ನಡೆಯಬೇಕಾಗಿರುವುದು ಕೇವಲ ಸಿಕ್ಕ ಬುರುಡೆ ಬಗ್ಗೆ ಅಲ್ಲ, ಅಲ್ಲಿ ನಡೆದಿದೆ ಎನ್ನಲಾಗ್ತಿರುವ ಅಸಹಜ ಸಾವುಗಳ ಬಗ್ಗೆ. ಅಧಿಕಾರಿಗಳು ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿರುವಂತೆ ತೋರುತ್ತಿಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಅಲ್ಲದೆ, ಎಸ್ಐಟಿಯೇ ತನಿಖೆ ದಾರಿ ತಪ್ಪುತ್ತಿದೆ ಎಂದು ಗಂಭೀರ ಆರೋಪಿಸಿದ್ದರು.
ಆದರೆ ಎಸ್ಐಟಿ ತನಿಖೆಯ ಮೇಲೆ ಸರ್ಕಾರದ ಒಳಗಡೆಯಿಂದಲೇ ಒತ್ತಡ ಬಿದ್ದುದರಿಂದ ತನಿಖೆ ಕುಂಠಿತವಾಗಿತ್ತು. ಬೆಳ್ತಂಗಡಿ ಕೋರ್ಟ್ ಮುಂದಿನ ತನಿಖೆಯ ಬಗ್ಗೆ ನಿರ್ದೇಶನ ನೀಡುವ ನಿರೀಕ್ಷೆಯಿತ್ತು. ಆದರೆ ಕೋರ್ಟ್, ಎಸ್ಐಟಿ ಪೂರ್ಣ ತನಿಖೆಯ ವರದಿ ನೀಡಿದ ಬಳಿಕವೇ ತೀರ್ಪು ಪ್ರಕಟಿಸುವುದಾಗಿ ಹೇಳಿರುವುದು ಒಟ್ಟು ತನಿಖೆ ಹಳ್ಳ ಹಿಡಿಯುವಂತಾಗಿದೆ. ಈವರೆಗಿನ ತನಿಖೆ ದೂರುದಾರ ಚಿನ್ನಯ್ಯನಿಗೆ ಮಾತ್ರ ಸೀಮಿತವಾಗಿತ್ತು ಎನ್ನುವ ಆರೋಪಗಳಿವೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ಹಲವಾರು ಹೆಣ್ಣು ಮಕ್ಕಳ ಸಾವಿನ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಗಳಿದ್ದರೂ, ಎಸ್ಐಟಿ ಆ ಕುರಿತು ತನಿಖೆಗೆ ಮುಂದಾಗಿಲ್ಲ.
Amid concerns over the alleged stagnation of the Special Investigation Team (SIT) probe into unnatural death cases in Dharmasthala, Karnataka State Women’s Commission Chairperson Nagalakshmi Chowdhary has written to Chief Secretary Shalini Rajneesh seeking details on the progress of the investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm