ಬ್ರೇಕಿಂಗ್ ನ್ಯೂಸ್
30-01-26 11:55 am HK News Desk ಕರ್ನಾಟಕ
ಕಾರವಾರ, ಜ 30 : ನ್ಯಾಯಾ ಎಲ್ಲರಿಗೂ ಒಂದೇ ಅನ್ನೋದು ಮತ್ತೊಮ್ಮೆ ಸಾಭೀತಾಗಿದೆ. ಹಣ, ಹುದ್ದೆ ಇದ್ದಾರೆ ಏನೂಬೇಕಾದ್ರು ಮಾಡಬಹುದು ಅಂದುಕೊಂಡವರಿಗೆ ನ್ಯಾಯಾಲಯದ ಮುಂದೆ ಎಲ್ಲರೂ ಸಮಾನಾರು ಅನ್ನೋದು ಫ್ರೂವ ಆಗಿದೆ.
ಯೆಸ್..ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಎರಡು ಗ್ರಾಮಗಳ ಮಧ್ಯೆ ವೈಮನಸ್ಸಿಗೂ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೆಡಿಎಸ್ ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್ ಪುತ್ರ, ಆರೋಪಿತ ಚಿರಾಗ್ ನನ್ನ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣವು ಕ್ರಿಶ್ಚಿಯನ್ ಸಮುದಾಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಯ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಇದೀಗ ದೂರು ದಾಖಲಾಗಿ 20 ದಿನಗಳ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆ ಹಿನ್ನೆಲೆ ;
ಜನವರಿ 9ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದ ನಿವಾಸದಲ್ಲಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಮೃತಳ ತಂದೆ ಕ್ರಿಸ್ತೋದ ಡಿಸೋಜಾ, ತಮ್ಮ ಮಗಳಿಗೆ ಚಿರಾಗ್ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಿ ಜನವರಿ 10ರಂದು ಕದ್ರಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
ಮೃತಳ ದೇಹದ ಮೇಲೆ ಕಚ್ಚಿದ ಗುರುತುಗಳು ಕಂಡುಬಂದ ಹಿನ್ನೆಲೆ ಅತ್ಯಾಚಾರದ ಶಂಕೆಯನ್ನೂ ತಂದೆ ವ್ಯಕ್ತಪಡಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿತ ಚಿರಾಗ್ ತನ್ನ ಪೋಷಕರೊಂದಿಗೆ ನಾಪತ್ತೆಯಾಗಿದ್ದ.
ಹಲವು ದಿನಗಳ ಕಳೆದರು ಆರೋಪಿಯನ್ನು ಬಂಧಿಸಿಲ್ಲ ಎಂದು ಕಾರಾವಾರದಲ್ಲಿ ಕ್ರಿಶ್ಚಿಯನ್ ಸಮುದಾಯ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಇದೇ ಪ್ರಕರಣದಲ್ಲಿ ಇತ್ತೀಚೆಗೆ ಕದ್ರಾ ಪಿಎಸ್ಐ ಅವರನ್ನು ಅಮಾನತು ಕೂಡ ಮಾಡಲಾಗಿದೆ.
20 ದಿನಗಳ ಬಳಿಕ ಬಂಧನ ;
ಆರೋಪಿಗಾಗಿ ಸುಮಾರು 20 ದಿನಗಳಿಂದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಕೊನೆಗೂ ಚಿರಾಗ್ ತನ್ನ ಮಾವನೊಂದಿಗೆ ಚೆನ್ನೈನಲ್ಲಿ ಇರುವುದನ್ನು ಪತ್ತೆಹಚ್ಚಿದ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ.
ನ್ಯಾಯಾಲಯದ ವಿಚಾರಣೆ ಮುಂದೂಡಿಕೆ ;
ಕಾರವಾರ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ಅರ್ಜಿ ವಿಚಾರಣೆ ನಡೆದಿದ್ದು, ಆರೋಪಿತ ಪರ ವಕೀಲ ನಾಗರಾಜ್ ನಾಯ್ಕ್ ಅವರು ಸುಮಾರು 2500 ಪುಟಗಳ ಚಾಟಿಂಗ್ ದಾಖಲೆಗಳು ಸೇರಿದಂತೆ ಹಲವು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಿತ ಚಿರಾಗ್ ಜಾಮೀನು ನಿರೀಕ್ಷೆಯಲ್ಲಿದ್ದರೂ, ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿ ವಿಚಾರಣೆಯನ್ನು ಜನವರಿ 31ಕ್ಕೆ ಮುಂದೂಡಿದೆ.
In a major breakthrough in the Rishael D’Souza suicide case from Karwar, police have arrested accused Chirag, son of JDS leader Chaitra Kotharkar, from Chennai after nearly 20 days. The arrest comes after statewide outrage, protests by the Christian community, and allegations of police inaction. The court has reserved its order on bail, with the next hearing scheduled for January 31.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 01:23 pm
HK News Desk
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm