Confident Group CJ Roy Suicide: ದೇಶ- ವಿದೇಶದಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಸಿ.ಜೆ ರಾಯ್‌ ಆತ್ಮಹತ್ಯೆ ; ಐಟಿ ಅಧಿಕಾರಿಗಳ ಎದುರಲ್ಲೇ ಶೂಟ್ ಮಾಡಿಕೊಂಡು ಸಾವು ! ಬೆಂಗಳೂರಿನ ಕಚೇರಿಯಲ್ಲೇ ಕೃತ್ಯ 

30-01-26 06:35 pm       Bangalore Correspondent   ಕರ್ನಾಟಕ

ದೇಶ- ವಿದೇಶದಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಸಿ.ಜೆ ರಾಯ್‌ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಚ್ಮಂಡ್ ಸರ್ಕಲ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ಸಮ್ಮುಖದಲ್ಲಿಯೇ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿದ್ದಾರೆ.

ಬೆಂಗಳೂರು, ಜ.30 : ದೇಶ- ವಿದೇಶದಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಸಿ.ಜೆ ರಾಯ್‌ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಚ್ಮಂಡ್ ಸರ್ಕಲ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ಸಮ್ಮುಖದಲ್ಲಿಯೇ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿದ್ದಾರೆ. ಅವರನ್ನು ಕೂಡಲೇ ಎಚ್ಎಸ್ಆರ್ ಲೇಔಟ್ ನಲ್ಲಿರುವ ನಾರಾಯಣ ಹಾಸ್ಪಿಟಲ್ ಗೆ ಸೇರಿಸಿದರೂ, ಅಲ್ಲಿ ಅವರು ಅಸುನೀಗಿದ್ದಾರೆ. 

ಸಿಜೆ ರಾಯ್ ದಿಢೀರ್ ಸಾವು ಉದ್ಯಮ ವಲಯದಲ್ಲಿ ಆಘಾತ ಮೂಡಿಸಿದೆ. ಕೆಲವು ದಿನಗಳಿಂದ ಐಟಿ ಅಧಿಕಾರಿಗಳು ಇವರ ಕಚೇರಿ, ಉದ್ಯಮ ಸಮೂಹದ ವಿಚಾರದಲ್ಲಿ ಪರಿಶೀಲನೆ ಕೈಗೊಂಡಿದ್ದು ಇಂದು ಕೂಡ ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದ್ದರು.‌ ಇಂದು ಮಧ್ಯಾಹ್ನ ರಾಯ್ ಸಮ್ಮುಖದಲ್ಲಿಯೇ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿತ್ತು. ಇದರಿಂದ ತೀವ್ರ ಒತ್ತಡಕ್ಕೆ ಒಳಗಾದ ರಾಯ್ ತನ್ನ ಪಿಸ್ತೂಲಿನಿಂದ ಎದೆಗೆ ಶೂಟ್ ಮಾಡಿಕೊಂಡಿದ್ದಾರೆ. ಅಲ್ಲಿದ್ದ ಅಧಿಕಾರಿಗಳೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಎರಡು ಇನೋವಾ ಕಾರಿನಲ್ಲಿ ಬಂದಿದ್ದರು ಎನ್ನುವ ಮಾಹಿತಿ ಲಭಿಸಿದೆ. 

ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದು ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು. ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದಲ್ಲದೆ, ಗಲ್ಫ್ ಮತ್ತು ಕೇರಳ, ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು. ರಾಯ್ ಅವರು ಕಾರುಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು, ದುಬೈ ಮತ್ತು ಭಾರತದಲ್ಲಿ ದುಬಾರಿ ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳನ್ನು ಹೊಂದಿದ್ದರು.

In a shocking development that has rattled India’s real estate and business community, Confident Group chairman Dr. CJ Roy died by suicide on Friday, January 30, 2026. The 57-year-old founder of the well-known real estate conglomerate was found dead after reportedly shooting himself at his office in central Bengaluru’s Richmond Circle area.